
ದಾವಣಗೆರೆ, 29 ಮಾರ್ಚ್ (ಹಿ.ಸ.):
ಆ್ಯಂಕರ್:ಉಪಚುನಾವಣೆ ಪ್ರಚಾರದ ಅಂಗವಾಗಿ ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದಲ್ಲಿ ರಾಜಕೀಯ ಚಟುವಟಿಕೆಗಳು ತೀವ್ರಗೊಂಡಿವೆ. ಈ ಹಿನ್ನೆಲೆ ಇಂದು ಹಿಂದುಳಿದ ವರ್ಗಗಳ ವಿವಿಧ ಸಮುದಾಯಗಳ ಪ್ರಮುಖರೊಂದಿಗೆ ಮಹತ್ವದ ಸಭೆ ಆಯೋಜಿಸಲಾಯಿತು.
ಸಭೆಯಲ್ಲಿ ಬಿಜೆಪಿ ಅಭ್ಯರ್ಥಿ ಶ್ರೀನಿವಾಸ್ ದಾಸಕರಿಯಪ್ಪ ಅವರೊಂದಿಗೆ ಪಕ್ಷದ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಭಾಗವಹಿಸಿ, ಸಂಘಟನೆಯ ತತ್ವಗಳು ಹಾಗೂ ಅಭಿವೃದ್ಧಿ ಕಾರ್ಯಗಳ ಬಗ್ಗೆ ಚರ್ಚಿಸಿದರು.
ಈ ವೇಳೆ ಮಾತನಾಡಿದ ವಿಜಯೇಂದ್ರ, “ಅಂತ್ಯೋದಯದ ಮೂಲಕ ಸಮಾಜದ ಕಟ್ಟಕಡೆಯ ವ್ಯಕ್ತಿಯ ಸಬಲೀಕರಣವೇ ನಮ್ಮ ಸಂಘಟನೆಯ ಮೂಲಮಂತ್ರ. ಹಿಂದುಳಿದ ವರ್ಗಗಳ ಅಭಿವೃದ್ಧಿಗೆ ಬಿಜೆಪಿ ಸದಾ ಬದ್ಧವಾಗಿದೆ” ಎಂದು ಹೇಳಿದರು.
ಸಭೆಯಲ್ಲಿ ಪಕ್ಷದ ಜಿಲ್ಲಾಧ್ಯಕ್ಷ ರಾಜಶೇಖರ್ ನಾಗಪ್ಪ, ಮಾಜಿ ಕೇಂದ್ರ ಸಚಿವ ಜಿ.ಎಂ. ಸಿದ್ದೇಶ್ವರ, ಶಾಸಕ ಬಿ.ಪಿ. ಹರೀಶ್, ವಿಧಾನ ಪರಿಷತ್ ಸದಸ್ಯ ಎಂ.ಜಿ. ಮೂಳೆ ಸೇರಿದಂತೆ ಹಲವು ನಾಯಕರು ಉಪಸ್ಥಿತರಿದ್ದರು.
---------------
ಹಿಂದೂಸ್ತಾನ್ ಸಮಾಚಾರ್ / Rakesh Mahadevappa