
ಕೊಪ್ಪಳ, 29 ಮಾರ್ಚ್ (ಹಿ.ಸ.):
ಆ್ಯಂಕರ್ : ಶ್ರೀ ಅಗ್ನಿ ಬನ್ನಿರಾಯಸ್ವಾಮಿ ಜಯಂತಿ ಅಂಗವಾಗಿ ಕೊಪ್ಪಳ ಜಿಲ್ಲಾಡಳಿತದ ವತಿಯಿಂದ ಶ್ರೀ ಅಗ್ನಿ ಬನ್ನಿರಾಯಸ್ವಾಮಿ ಅವರ ಭಾವಚಿತ್ರಕ್ಕೆ ಶನಿವಾರ ಪುಷ್ಪ ನಮನ ಸಲ್ಲಿಸಲಾಯಿತು.
ಜಿಲ್ಲಾಡಳಿತ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಯೋಗದಲ್ಲಿ ಶ್ರೀ ಅಗ್ನಿ ಬನ್ನಿರಾಯಸ್ವಾಮಿ ಜಯಂತಿ ಜಿಲ್ಲಾಡಳಿತ ಕಛೇರಿ ಸಭಾಂಗಣದಲ್ಲಿ ಸರಳವಾಗಿ ಆಚರಿಸಲಾಯಿತು.
ಶಾಲಾ ಶಿಕ್ಷಣ ಮತ್ತು ಸಾಕ್ಷರತೆ ಇಲಾಖೆ ಉಪ ನಿರ್ದೇಶಕ ಸೋಮಶೇಖರ್ ಗೌಡ ಪಾಟೀಲ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ನಿರ್ದೇಶಕ ಕರ್ಣಕುಮಾರ್, ಜಿಲ್ಲಾ ದೈಹಿಕ ಶಿಕ್ಷಣಾಧಿಕಾರಿ ಬಸವರಾಜ್, ಡಿ.ವೈ.ಪಿ.ಸಿ ಅಂಜನಪ್ಪ, ಶಾಲಾ ಶಿಕ್ಷಣ ಮತ್ತು ಸಾಕ್ಷರತೆ ಇಲಾಖೆ ವಿಷಯ ಪರೀಕ್ಷಕರಾದ ಬಿ.ಎಂ ಸವದತ್ತಿ ಹಾಗೂ ಶರಣಗೌಡರು ಸೇರಿದಂತೆ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ವಿವಿಧ ಇಲಾಖೆಯ ಸಿಬ್ಬಂದಿಗಳು ಉಪಸ್ಥಿತರಿದ್ದು ಶ್ರೀ ಅಗ್ನಿ ಬನ್ನಿರಾಯಸ್ವಾಮಿ ಅವರ ಭಾವಚಿತ್ರಕ್ಕೆ ಪುಷ್ಪಾರ್ಪಣೆ ಮಾಡಿ ಗೌರವ ನಮನ ಸಲ್ಲಿಸಿದರು.
---------------
ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್