
ಹೊಸಪೇಟೆ, 29 ಮಾರ್ಚ್ (ಹಿ.ಸ.)
ಆ್ಯಂಕರ್ : 2026-27ನೇ ಸಾಲಿಗೆ ಪರಿಶಿಷ್ಟ ಪಂಗಡ ವಿದ್ಯಾರ್ಥಿಗಳಿಗೆ ಪ್ರತಿಷ್ಠತ ಶಾಲೆಗಳಲ್ಲಿ ಅರ್ಹತಾ ಪರೀಕ್ಷೆ ಮೂಲಕ 6ನೇ ತರಗತಿಗೆ ಪ್ರವೇಶಾತಿಗೆ ಅರ್ಜಿ ಆಹ್ವಾನಿಸಲಾಗಿದೆ. ಏಪ್ರಿಲ್ 15ರಿಂದ ಅರ್ಜಿ ಸಲ್ಲಿಕೆ ಪ್ರಕ್ರಿಯೆ ಆರಂಭವಾಗಲಿದ್ದು, ಮೇ 4 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ.
ಪ್ರತಿಷ್ಠಿತ ಶಾಲೆಗಳಿಗೆ ಪ್ರವೇಶಾತಿ ಪಡೆಯಲು 5ನೇ ತರಗತಿಯಲ್ಲಿ ಶೇ.60ರಷ್ಟು ಅಂಕ ಪಡೆದಿರಬೇಕು. ಕುಟುಂಬದ ವಾರ್ಷಿಕ ಆದಾಯ ರೂ.2.50 ಲಕ್ಷಗಳೊಳಗಿರುವ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಬಹುದು. ವಿದ್ಯಾರ್ಥಿಗಳನ್ನು ಮೇ 19 ರಂದು ಕೌನ್ಸಿಲಿಂಗ್ ಮೂಲಕ ಆಯ್ಕೆ ಮಾಡಲಾಗುವುದು. ಅರ್ಜಿಗಳನ್ನು ಆಯಾ ತಾಲೂಕು ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿಗಳ ಕಚೇರಿಗಳಲ್ಲಿ ಅಥವಾ ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿಗಳ ಕಚೇರಿಗಳಲ್ಲಿ ಪಡೆಯಬಹುದು.
ಹೆಚ್ಚಿನ ಮಾಹಿತಿಗಾಗಿ ತಾಲೂಕು ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ಹೊಸಪೇಟೆ ದೂರವಾಣಿ ಸಂಖ್ಯೆ : 9742423530, ಕೂಡ್ಲಿಗಿ 7022223200, ಹರಪನಹಳ್ಳಿ 7899465098, ಹಡಗಲಿ 9901980862, ಹಗರಿಬೊಮ್ಮನಹಳ್ಳಿ 7349418044 ಗೆ ಸಂಪರ್ಕಿಸಬಹುದು ಎಂದು ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿ ತಿಳಿಸಿದ್ದಾರೆ.
---------------
ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್