
ಕೊಪ್ಪಳ, 29 ಮಾರ್ಚ್ (ಹಿ.ಸ.)
ಆ್ಯಂಕರ್ : ಕುಕನೂರು ತಾಲ್ಲೂಕು ಆಡಳಿತದ ವತಿಯಿಂದ ತಾಲ್ಲೂಕು ಕೇಂದ್ರದಲ್ಲಿ ಏಪ್ರಿಲ್ 5 ರಂದು ಡಾ.ಬಾಬು ಜಗಜೀವನ್ ರಾಂ ಅವರ 119ನೇ ಜನ್ಮ ದಿನಾಚರಣೆ ಮತ್ತು ಏಪ್ರಿಲ್ 14 ರಂದು ಡಾ.ಬಿ.ಆರ್.ಅಂಬೇಡ್ಕರ್ ರವರ 135ನೇ ಜನ್ಮ ದಿನಾಚರಣೆಯನ್ನು ಆಚರಿಸಲಾಗುತ್ತಿದ್ದು, ಈ ಕುರಿತು ಚರ್ಚಿಸಲು ಮಾ.25 ರಂದು ನಿಗದಿಪಡಿಸಲಾಗಿದ್ದ ಪೂರ್ವಭಾವಿ ಸಭೆಯನ್ನು ಕಾರಣಾಂತರಗಳಿಂದ ಮಾರ್ಚ್ 31 ಕ್ಕೆ ಮುಂದೂಡಲಾಗಿದೆ ಎಂದು
ಮಾ.31 ರಂದು ಬೆಳಿಗ್ಗೆ 11 ಗಂಟೆಗೆ ಕುಕನೂರಿನ ಪ್ರವಾಸಿ ಮಂದಿರದಲ್ಲಿ ಪೂರ್ವಭಾವಿ ಸಭೆಯನ್ನು ನಿಗದಿಪಡಿಸಲಾಗಿದೆ.
ಆದ್ದರಿಂದ ತಾಲ್ಲೂಕು ವ್ಯಾಪ್ತಿಯ ತಾಲ್ಲೂಕು ಮಟ್ಟದ ಅಧಿಕಾರಿಗಳು, ಜನಪ್ರತಿನಿಧಿಗಳು, ವಿವಿಧ ಸಂಘ-ಸಂಸ್ಥೆ, ಸಂಘಟನೆಗಳ ಅಧ್ಯಕ್ಷರು ಹಾಗೂ ಪದಾಧಿಕಾರಿಗಳು, ಮುಖಂಡರುಗಳು, ಮಾಧ್ಯಮ ವರದಿಗಾರರು ಪೂರ್ವಭಾವಿ ಸಭೆಗಳಿಗೆ ಹಾಜರಾಗಿ ಅಗತ್ಯ ಸಲಹೆ ಸೂಚನೆಗಳನ್ನು ನೀಡಬೇಕೆಂದು ಯಲಬುರ್ಗಾ ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕರು(ಗ್ರೇಡ್-2) ತಿಳಿಸಿದ್ದಾರೆ.
---------------
ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್