
ದಾವಣಗೆರೆ, 29 ಮಾರ್ಚ್ (ಹಿ.ಸ.):
ಆ್ಯಂಕರ್:
ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ಜನಪ್ರಿಯ ‘ಮನ್ ಕಿ ಬಾತ್’ ಕಾರ್ಯಕ್ರಮವನ್ನು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರು ದಾವಣಗೆರೆಯಲ್ಲಿ ಪಕ್ಷದ ನಾಯಕರು, ಪ್ರಮುಖರು ಹಾಗೂ ಕಾರ್ಯಕರ್ತರೊಂದಿಗೆ ಆಲಿಸಿದರು.
ಕಾರ್ಯಕ್ರಮದ ಬಳಿಕ ಮಾತನಾಡಿದ ವಿಜಯೇಂದ್ರ, ‘ಮನ್ ಕಿ ಬಾತ್’ ಕೇವಲ ಭಾಷಣವಲ್ಲ, ಅದು ಭಾರತೀಯರ ಆಶೋತ್ತರಗಳ ಜೀವಂತ ಪ್ರತಿಬಿಂಬವಾಗಿದೆ ಎಂದು ಹೇಳಿದರು. ಸಮಾಜದ ತಳಮಟ್ಟದಲ್ಲಿ ಮೌನವಾಗಿ ಸೇವೆ ಸಲ್ಲಿಸುವ ಅಜ್ಞಾತ ಸಾಧಕರ ಯಶೋಗಾಥೆಗಳು ಹಾಗೂ ದೇಶದ ಸುಸ್ಥಿರ ಅಭಿವೃದ್ಧಿಗೆ ಸಂಬಂಧಿಸಿದ ವಿಷಯಗಳು ಜನರಲ್ಲಿ ಹೊಸ ಚೈತನ್ಯ ಮತ್ತು ಪ್ರೇರಣೆಯನ್ನು ಮೂಡಿಸುತ್ತಿವೆ ಎಂದರು.
ಇಂತಹ ಕಾರ್ಯಕ್ರಮಗಳು ರಾಷ್ಟ್ರಸೇವೆಯ ದಿಕ್ಕಿನಲ್ಲಿ ಎಲ್ಲರನ್ನು ಒಂದಾಗಿ ಮುನ್ನಡೆಯಲು ಪ್ರೇರೇಪಿಸುತ್ತವೆ. ದೇಶದ ಅಭಿವೃದ್ಧಿಗೆ ಕೈಜೋಡಿಸುವ ನಮ್ಮ ಸಂಕಲ್ಪವನ್ನು ಮತ್ತಷ್ಟು ಬಲಪಡಿಸುವಲ್ಲಿ ‘ಮನ್ ಕಿ ಬಾತ್’ ಮಹತ್ವದ ಪಾತ್ರ ವಹಿಸುತ್ತಿದೆ ಎಂದು ಅವರು ಅಭಿಪ್ರಾಯಪಟ್ಟರು.
---------------
ಹಿಂದೂಸ್ತಾನ್ ಸಮಾಚಾರ್ / Rakesh Mahadevappa