
ಬಾಗಲಕೋಟೆ, 30 ಮಾರ್ಚ್ (ಹಿ.ಸ.):
ಆ್ಯಂಕರ್:
ಬಾಗಲಕೋಟೆ ವಿಧಾನಸಭಾ ಉಪಚುನಾವಣೆಯ ಹಿನ್ನೆಲೆಯಲ್ಲಿ ಬಾಗಲಕೋಟೆ ಕ್ಷೇತ್ರದಲ್ಲಿ ಇಂದು ಬಿಜೆಪಿ ಪ್ರಚಾರ ಅಭಿಯಾನ ಭರ್ಜರಿಯಾಗಿ ನಡೆಯಿತು. ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರ ನೇತೃತ್ವದಲ್ಲಿ ಹಾಲುಮತ ಸಮಾಜದ ಮುಖಂಡರು ಹಾಗೂ ಬಾಂಧವರೊಂದಿಗೆ ವಿಶೇಷ ಸಭೆ ಹಾಗೂ ಮನೆಮನೆ ಸಂಪರ್ಕ ಕಾರ್ಯಕ್ರಮ ಹಮ್ಮಿಕೊಳ್ಳಲಾಯಿತು.
ಈ ಸಂದರ್ಭದಲ್ಲಿ ಬಿಜೆಪಿ ಅಭ್ಯರ್ಥಿ ವೀರಣ್ಣ ಚರಂತಿಮಠ ಪರವಾಗಿ ಮತಯಾಚನೆ ನಡೆಸಿ, ಕ್ಷೇತ್ರದ ಸಮಗ್ರ ಅಭಿವೃದ್ಧಿ ಹಾಗೂ ಸಮಾಜದ ಸಬಲೀಕರಣಕ್ಕಾಗಿ ‘ಕಮಲ’ ಗುರುತಿಗೆ ಮತ ನೀಡುವಂತೆ ಮನವಿ ಮಾಡಲಾಯಿತು.
ಕಾರ್ಯಕ್ರಮದಲ್ಲಿ ವಿಧಾನ ಪರಿಷತ್ ವಿರೋಧ ಪಕ್ಷದ ಮುಖ್ಯ ಸಚೇತಕ ದೊಡ್ಡನಗೌಡ ಪಾಟೀಲ್, ಜಿಲ್ಲಾಧ್ಯಕ್ಷ ಶಾಂತಗೌಡ ಪಾಟೀಲ್, ಹಾಲುಮತ ಸಮಾಜದ ಜಿಲ್ಲಾಧ್ಯಕ್ಷ ಜಿ.ಎಸ್. ಗ್ಯಾನಗೌಡರ್ ಸೇರಿದಂತೆ ಹಲವಾರು ಮುಖಂಡರು ಪಾಲ್ಗೊಂಡಿದ್ದರು.
ಇದಲ್ಲದೆ ಶಾಸಕರುಗಳಾದ ಹನುಮಂತ ನಿರಾಣಿ, ಬಸವರಾಜ್ ಮತ್ತಿಮಡು, ಶೈಲೇಂದ್ರ ಬೆಲ್ದಾಳೆ, ಮಾಜಿ ಶಾಸಕರುಗಳಾದ ಅರುಣ್ ಶಾಪುರ್, ರಾಜುಗೌಡ ಸುರಪುರ ಹಾಗೂ ರಾಜ್ಯ ಕಾರ್ಯದರ್ಶಿ ಶರಣು ತಳ್ಳಿಕೇರಿ ಸೇರಿದಂತೆ ಪಕ್ಷದ ಪ್ರಮುಖರು ಹಾಗೂ ಸಮಾಜದ ಗಣ್ಯರು ಉಪಸ್ಥಿತರಿದ್ದರು.
---------------
ಹಿಂದೂಸ್ತಾನ್ ಸಮಾಚಾರ್ / Rakesh Mahadevappa