ಸೊರಬದಲ್ಲಿ ನೂತನ ಪೊಲೀಸ್ ವಾಹನಗಳ ಹಸ್ತಾಂತರ
ಶಿವಮೊಗ್ಗ, 30 ಮಾರ್ಚ್ (ಹಿ.ಸ.): ಆ್ಯಂಕರ್:ರಾಜ್ಯದ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಸಚಿವರು ಹಾಗೂ ಶಿವಮೊಗ್ಗ ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್. ಮಧು ಬಂಗಾರಪ್ಪ ಅವರು ಇಂದು ಸೊರಬದಲ್ಲಿ ನೂತನ ಪೊಲೀಸ್ ವಾಹನಗಳ ಉದ್ಘಾಟನೆ ಮತ್ತು ಹಸ್ತಾಂತರ ಕಾರ್ಯಕ್ರಮ ನೆರವೇರಿಸಿದರು. 2024-25 ಹಾಗೂ 2025-
Handover


ಶಿವಮೊಗ್ಗ, 30 ಮಾರ್ಚ್ (ಹಿ.ಸ.):

ಆ್ಯಂಕರ್:ರಾಜ್ಯದ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಸಚಿವರು ಹಾಗೂ ಶಿವಮೊಗ್ಗ ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್. ಮಧು ಬಂಗಾರಪ್ಪ ಅವರು ಇಂದು ಸೊರಬದಲ್ಲಿ ನೂತನ ಪೊಲೀಸ್ ವಾಹನಗಳ ಉದ್ಘಾಟನೆ ಮತ್ತು ಹಸ್ತಾಂತರ ಕಾರ್ಯಕ್ರಮ ನೆರವೇರಿಸಿದರು.

2024-25 ಹಾಗೂ 2025-26ನೇ ಸಾಲಿನ ಶಾಸಕರ ಸ್ಥಳೀಯ ಪ್ರದೇಶಾಭಿವೃದ್ಧಿ ಅನುದಾನದಡಿ ಸೊರಬ ಪೊಲೀಸ್ ವೃತ್ತ ಕಚೇರಿ ಮತ್ತು ಸೊರಬ ಪೊಲೀಸ್ ಠಾಣೆಗೆ, ಜೊತೆಗೆ ಗೃಹ ಇಲಾಖೆಯ ಅನುದಾನದಡಿ ಆನವಟ್ಟಿ ಪೊಲೀಸ್ ಠಾಣೆಗೆ ಒಟ್ಟು ಮೂರು ಹೊಸ ವಾಹನಗಳನ್ನು ಒದಗಿಸಲಾಗಿದೆ.

ಸೊರಬ ಪೊಲೀಸ್ ಠಾಣೆ ಆವರಣದಲ್ಲಿ ಇಂದು ನಡೆದ ಕಾರ್ಯಕ್ರಮದಲ್ಲಿ ಸಚಿವರು ಈ ವಾಹನಗಳನ್ನು ಶಿವಮೊಗ್ಗ ಜಿಲ್ಲಾ ಪೊಲೀಸರಿಗೆ ಹಸ್ತಾಂತರಿಸಿದರು. ಈ ಮೂಲಕ ಪೊಲೀಸ್ ಇಲಾಖೆಯ ಕಾರ್ಯಕ್ಷಮತೆ ಹೆಚ್ಚಿಸಲು ಹಾಗೂ ಸಾರ್ವಜನಿಕ ಸುರಕ್ಷತೆ ಬಲಪಡಿಸಲು ಸರ್ಕಾರ ಬದ್ಧವಾಗಿದೆ ಎಂಬ ಸಂದೇಶ ನೀಡಿದರು.

---------------

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande