
ದಾವಣಗೆರೆ, 30 ಮಾರ್ಚ್ (ಹಿ.ಸ.):
ಆ್ಯಂಕರ್:
ಜಿಎಸ್‌ಟಿ ಸಂಗ್ರಹದಲ್ಲಿ ಕರ್ನಾಟಕ ರಾಜ್ಯ ಇಡೀ ದೇಶದಲ್ಲೇ ಎರಡನೇ ಸ್ಥಾನದಲ್ಲಿರುವುದು ಸರ್ಕಾರದ ಜನಪರ ಆಡಳಿತದ ಪ್ರತಿಫಲ ಎಂದು ದಾವಣಗೆರೆ ಸಂಸದೆ ಪ್ರಭಾ ಮಲ್ಲಿಕಾರ್ಜುನ ತಿಳಿಸಿದ್ದಾರೆ.
ದಾವಣಗೆರೆ ದಕ್ಷಿಣ ಉಪ ಚುನಾವಣೆ ಅಂಗವಾಗಿ ನಾಗರಸನಹಳ್ಳಿ ಗ್ರಾಮದಲ್ಲಿ ಮನೆಮನೆಗೆ ಭೇಟಿ ನೀಡಿ ಪ್ರಚಾರ ನಡೆಸಿದ ಅವರು, ಪಾರದರ್ಶಕ ಮತ್ತು ಭ್ರಷ್ಟಾಚಾರ ರಹಿತ ಆಡಳಿತ ಕಾಂಗ್ರೆಸ್ ಪಕ್ಷದಿಂದ ಮಾತ್ರ ಸಾಧ್ಯವೆಂದು ಹೇಳಿದರು.
ಈ ವೇಳೆ ಕಾಂಗ್ರೆಸ್ ಅಭ್ಯರ್ಥಿ ಸಮರ್ಥ್ ಶಾಮನೂರು ಅವರಿಗೆ ಬೆಂಬಲ ನೀಡುವಂತೆ ಸಾರ್ವಜನಿಕರಿಗೆ ಮನವಿ ಮಾಡಿದರು.
ಜನರ ವಿಶ್ವಾಸ ಮತ್ತು ಉತ್ತಮ ಆಡಳಿತದಿಂದಲೇ ರಾಜ್ಯವು ಆರ್ಥಿಕವಾಗಿ ಪ್ರಗತಿ ಸಾಧಿಸುತ್ತಿದ್ದು, ಮುಂದಿನ ದಿನಗಳಲ್ಲಿಯೂ ಇದೇ ದಾರಿಯಲ್ಲಿ ಅಭಿವೃದ್ಧಿ ಮುಂದುವರಿಯಲಿದೆ ಎಂದು ಹೇಳಿದರು.
---------------
ಹಿಂದೂಸ್ತಾನ್ ಸಮಾಚಾರ್ / Rakesh Mahadevappa