
ಪಾಟ್ನಾ, 30 ಮಾರ್ಚ್ (ಹಿ.ಸ.):
ಆ್ಯಂಕರ್:ಬಿಹಾರದಲ್ಲಿ ಮಹತ್ವದ ರಾಜಕೀಯ ಬೆಳವಣಿಗೆಯಾಗಿ, ಬಿಜೆಪಿ ರಾಜ್ಯಾಧ್ಯಕ್ಷ ನಿತಿನ್ ನವೀನ ಅವರು ತಮ್ಮ ಬಂಕಿಪುರ ವಿಧಾನಸಭಾ ಕ್ಷೇತ್ರದ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.
ಪಾಟ್ನಾದ ಬಂಕಿಪುರ ಕ್ಷೇತ್ರವನ್ನು ಪ್ರತಿನಿಧಿಸುತ್ತಿದ್ದ ನಿತಿನ್ ನವೀನ್ ಅವರು ಸಾಮಾಜಿಕ ಜಾಲತಾಣದಲ್ಲಿ ಭಾವನಾತ್ಮಕ ಸಂದೇಶವನ್ನು ಹಂಚಿಕೊಂಡು ತಮ್ಮ ರಾಜಕೀಯ ಪಯಣವನ್ನು ಸ್ಮರಿಸಿದ್ದಾರೆ. 2006ರಲ್ಲಿ ತಮ್ಮ ತಂದೆ ನಿಧನವಾದ ಬಳಿಕ ಪಕ್ಷವು ನೀಡಿದ ಅವಕಾಶದಿಂದ ರಾಜಕೀಯ ಜೀವನ ಆರಂಭವಾದದ್ದು, ಅಲ್ಲಿಂದ 20 ವರ್ಷಗಳ ಸೇವೆಯಲ್ಲಿ ಕ್ಷೇತ್ರದ ಅಭಿವೃದ್ಧಿಗೆ ಶ್ರಮಿಸಿದ ವಿಚಾರವನ್ನು ಅವರು ಉಲ್ಲೇಖಿಸಿದ್ದಾರೆ.
ಸತತ ಐದು ಅವಧಿಗಳ ಕಾಲ ಜನಪ್ರತಿನಿಧಿಯಾಗಿ ಆಯ್ಕೆಯಾಗಿರುವುದನ್ನು ಸ್ಮರಿಸಿದ ಅವರು, ಜನರ ವಿಶ್ವಾಸ ಮತ್ತು ಕಾರ್ಯಕರ್ತರ ಬೆಂಬಲವೇ ತಮ್ಮ ಶಕ್ತಿ ಎಂದು ಹೇಳಿದ್ದಾರೆ. ಶಾಸಕರಾಗಿ ಸದನದ ಒಳಗೆ ಹಾಗೂ ಹೊರಗೆ ಜನರ ಸಮಸ್ಯೆಗಳನ್ನು ಎತ್ತಿಹಿಡಿದು ಪರಿಹಾರ ಕಂಡುಕೊಳ್ಳಲು ಪ್ರಯತ್ನಿಸಿದ್ದೇನೆ ಎಂದು ತಿಳಿಸಿದ್ದಾರೆ.
ಪ್ರಧಾನಿ ನರೇಂದ್ರ ಮೋದಿ ಮತ್ತು ಮುಖ್ಯಮಂತ್ರಿ ನೀತಿಶ ಕುಮಾರ ಅವರ ನೇತೃತ್ವದಲ್ಲಿ ಸಚಿವನಾಗಿ ಸೇವೆ ಸಲ್ಲಿಸಿದ ಅನುಭವವನ್ನು ಉಲ್ಲೇಖಿಸಿದ ಅವರು, ಹಲವು ಪ್ರಮುಖ ಯೋಜನೆಗಳನ್ನು ಜಾರಿಗೆ ತರಲು ಅವಕಾಶ ಸಿಕ್ಕುದಕ್ಕಾಗಿ ಕೃತಜ್ಞತೆ ವ್ಯಕ್ತಪಡಿಸಿದ್ದಾರೆ.
ಇದೀಗ ಪಕ್ಷವು ನೀಡಿರುವ ಹೊಸ ಜವಾಬ್ದಾರಿಯನ್ನು ಗಮನದಲ್ಲಿಟ್ಟುಕೊಂಡು ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿರುವುದಾಗಿ ಅವರು ತಿಳಿಸಿದ್ದಾರೆ. ಮುಂದುವರಿದರೂ ಬಿಹಾರ ಹಾಗೂ ತಮ್ಮ ಕ್ಷೇತ್ರದ ಅಭಿವೃದ್ಧಿಗೆ ಬದ್ಧರಾಗಿರುವುದಾಗಿ ನಿತಿನ್ ನವೀನ್ ಸ್ಪಷ್ಟಪಡಿಸಿದ್ದಾರೆ.
---------------
ಹಿಂದೂಸ್ತಾನ್ ಸಮಾಚಾರ್ / Rakesh Mahadevappa