
ಬೆಂಗಳೂರು, 30 ಮಾರ್ಚ್ (ಹಿ.ಸ.):
ಆ್ಯಂಕರ್:
ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಮೇಲ್ವಿಚಾರಣಾ ಕೇಂದ್ರ ಬಿಡುಗಡೆ ಮಾಡಿದ ಹವಾಮಾನ ಮುನ್ಸೂಚನೆಯ ಪ್ರಕಾರ, ರಾಜ್ಯದಾದ್ಯಂತ ಇಂದು ಒಣ ಹವೆ ಹಾಗೂ ಬಿಸಿಲಿನ ವಾತಾವರಣ ಮುಂದುವರಿಯುವ ಸಾಧ್ಯತೆ ಇದೆ.
ಮಧ್ಯಾಹ್ನ ನಂತರ ಕೆಲವು ಕಡೆಗಳಲ್ಲಿ ಮೋಡ ಕವಿದ ವಾತಾವರಣ ಕಾಣಿಸಿಕೊಳ್ಳುವ ಸಾಧ್ಯತೆ ಇದ್ದು, ಅಲ್ಲಲ್ಲಿ ಗುಡುಗು-ಸಿಡಿಲು ಸಹಿತ ಜೋರಾದ ಗಾಳಿಯೊಂದಿಗೆ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸದೆ.
ಜನರು ಬಿಸಿಲಿನ ತೀವ್ರತೆಯಿಂದ ಎಚ್ಚರಿಕೆ ವಹಿಸುವಂತೆ ಹಾಗೂ ಮಳೆ-ಗುಡುಗು ಸಂದರ್ಭಗಳಲ್ಲಿ ಸುರಕ್ಷತಾ ಕ್ರಮಗಳನ್ನು ಅನುಸರಿಸುವಂತೆ ಸೂಚಿಸಲಾಗಿದೆ.
---------------
ಹಿಂದೂಸ್ತಾನ್ ಸಮಾಚಾರ್ / Rakesh Mahadevappa