
ಬಾಗಲಕೋಟೆ, 30 ಮಾರ್ಚ್ (ಹಿ.ಸ.):
ಆ್ಯಂಕರ್:ರಾಜ್ಯ ಮಹಿಳಾ ಕಾಂಗ್ರೆಸ್ ಘಟಕದ ಅಧ್ಯಕ್ಷೆ ಸೌಮ್ಯ ರೆಡ್ಡಿ ಅವರು ಇಂದು ಬಾಗಲಕೋಟೆ ಜಿಲ್ಲಾ ಕಾಂಗ್ರೆಸ್ ಕಚೇರಿಗೆ ಭೇಟಿ ನೀಡಿ, ಮಹಿಳಾ ಕಾಂಗ್ರೆಸ್ ಜಿಲ್ಲಾಧ್ಯಕ್ಷರು, ಪದಾಧಿಕಾರಿಗಳು ಹಾಗೂ ಕಾರ್ಯಕರ್ತರೊಂದಿಗೆ ಮಹತ್ವದ ಸಭೆ ನಡೆಸಿದರು.
ಸಭೆಯಲ್ಲಿ ಬಾಗಲಕೋಟೆ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಉಮೇಶ್ ಮೇಟಿ ಅವರ ಪರವಾಗಿ ವ್ಯಾಪಕ ಪ್ರಚಾರ ಕೈಗೊಳ್ಳುವ ಬಗ್ಗೆ ಚರ್ಚೆ ನಡೆಯಿತು. ವಿಶೇಷವಾಗಿ ಮಹಿಳಾ ಮತದಾರರನ್ನು ಆಕರ್ಷಿಸುವ ತಂತ್ರಗಳು, ಮನೆಮನೆಗೆ ಸಂಪರ್ಕ ಕಾರ್ಯಕ್ರಮಗಳು ಹಾಗೂ ಬೂತ್ ಮಟ್ಟದ ಸಂಘಟನೆ ಬಲಪಡಿಸುವ ಕುರಿತಾಗಿ ಮಾರ್ಗದರ್ಶನ ನೀಡಲಾಯಿತು.
ಈ ಸಂದರ್ಭದಲ್ಲಿ ಮಹಿಳಾ ಕಾರ್ಯಕರ್ತರನ್ನು ಹೆಚ್ಚು ಚುರುಕುಗೊಳಿಸಿ, ಕ್ಷೇತ್ರದಲ್ಲಿ ಕಾಂಗ್ರೆಸ್ ಪಕ್ಷದ ಗೆಲುವಿಗಾಗಿ ಸಮನ್ವಯದಿಂದ ಕಾರ್ಯನಿರ್ವಹಿಸಲು ಸೌಮ್ಯ ರೆಡ್ಡಿ ಕರೆ ನೀಡಿದರು.
---------------
ಹಿಂದೂಸ್ತಾನ್ ಸಮಾಚಾರ್ / Rakesh Mahadevappa