
ಗುವಾಹಟಿ, 31 ಮಾರ್ಚ್ (ಹಿ.ಸ.):
ಆ್ಯಂಕರ್:
ಅಸ್ಸಾಂ ವಿಧಾನಸಭಾ ಚುನಾವಣೆಗೆ ಸಂಬಂಧಿಸಿದಂತೆ ಬಿಜೆಪಿ ತನ್ನ ‘ಸಂಕಲ್ಪ ಪತ್ರ’ವನ್ನು ಮಂಗಳವಾರ ಬೆಳಿಗ್ಗೆ ಬಿಡುಗಡೆ ಮಾಡಿದೆ.
ಪಕ್ಷದ ಪ್ರಧಾನ ಕಚೇರಿಯಾದ ಅಟಲ್ ಬಿಹಾರಿ ವಾಜಪೇಯಿ ಭವನದಲ್ಲಿ ನಡೆದ ಕಾರ್ಯಕ್ರಮದಲ್ಲಿ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಪ್ರಣಾಳಿಕೆಯನ್ನು ಅನಾವರಣಗೊಳಿಸಿದರು.
ಈ ಸಂದರ್ಭದಲ್ಲಿ ಕೇಂದ್ರ ಸಚಿವರಾದ ಸರ್ಬಾನಂದ ಸೋನೋವಾಲ್, ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ, ರಾಜ್ಯ ಬಿಜೆಪಿ ಅಧ್ಯಕ್ಷ ದಿಲೀಪ್ ಸೈಕಿಯಾ, ಕೇಂದ್ರ ಸಚಿವೆ ಪಬಿತ್ರಾ ಮಾರ್ಗರಿಟಾ, ಅಸ್ಸಾಂ ಉಸ್ತುವಾರಿ ಬೈಜಯಂತ್ ಪಾಂಡಾ ಸೇರಿದಂತೆ ಹಲವು ನಾಯಕರು ಭಾಗವಹಿಸಿದರು.
ಪ್ರಣಾಳಿಕೆ ಬಿಡುಗಡೆ ಬಳಿಕ ಮಾತನಾಡಿದ ಸೀತಾರಾಮನ್ ಅವರು ಕಳೆದ ಹತ್ತು ವರ್ಷಗಳಲ್ಲಿ ಎನ್‌ಡಿಎ ಸರ್ಕಾರ ಅಸ್ಸಾಂನಲ್ಲಿ ಕೈಗೊಂಡ ಅಭಿವೃದ್ಧಿ ಕ್ರಮಗಳನ್ನು ವಿವರಿಸಿದರು. ಉದ್ಯೋಗ, ಶಿಕ್ಷಣ, ಆರೋಗ್ಯ, ಕೈಗಾರಿಕೆ, ಭದ್ರತೆ, ಮೂಲಸೌಕರ್ಯ ಮತ್ತು ಮಹಿಳಾ ಸಬಲೀಕರಣ ಕ್ಷೇತ್ರಗಳಲ್ಲಿ ಸಾಧನೆಗಳನ್ನು ಅವರು ಉಲ್ಲೇಖಿಸಿದರು. ಇದೇ ವೇಳೆ ಕಾಂಗ್ರೆಸ್ ಆಡಳಿತದಲ್ಲಿ ರಾಜ್ಯ ನಿರ್ಲಕ್ಷಿತವಾಗಿತ್ತು ಎಂದು ಆರೋಪಿಸಿದರು.
ಮುಂದಿನ ಐದು ವರ್ಷಗಳಲ್ಲಿ ಅಸ್ಸಾಂನ ಸಮಗ್ರ ಅಭಿವೃದ್ಧಿಗೆ ಬಿಜೆಪಿ ಬದ್ಧವಾಗಿದೆ ಎಂದು ಅವರು ಸ್ಪಷ್ಟಪಡಿಸಿದರು.
ಕಾರ್ಯಕ್ರಮದ ಆರಂಭದಲ್ಲಿ ರಾಜ್ಯ ಬಿಜೆಪಿ ಅಧ್ಯಕ್ಷ ದಿಲೀಪ್ ಸೈಕಿಯಾ ಸ್ವಾಗತ ಭಾಷಣ ಮಾಡಿದರು. ಪ್ರಣಾಳಿಕೆಯನ್ನು ತಯಾರಿಸಲು ಕೈಗೊಂಡ ಕ್ರಮಗಳ ವಿವರವನ್ನು ಅವರು ನೀಡಿದರು. ಬಳಿಕ ಸರ್ಬಾನಂದ ಸೋನೋವಾಲ್ ಕೂಡ ತಮ್ಮ ಅಭಿಪ್ರಾಯಗಳನ್ನು ಹಂಚಿಕೊಂಡರು.
---------------
ಹಿಂದೂಸ್ತಾನ್ ಸಮಾಚಾರ್ / Rakesh Mahadevappa