ಬಾಗಲಕೋಟೆ ಗಲಭೆ ಪ್ರಕರಣ: ಬಂಧಿತ ಕಾರ್ಯಕರ್ತರ ಕುಟುಂಬಗಳಿಗೆ ಧೈರ್ಯ ತುಂಬಿದ ವಿಜಯೇಂದ್ರ
ಬಾಗಲಕೋಟೆ, 31 ಮಾರ್ಚ್ (ಹಿ.ಸ.): ಆ್ಯಂಕರ್: ಬಾಗಲಕೋಟೆಯಲ್ಲಿ ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಳೆದ ತಿಂಗಳು ನಡೆದ ಕಲ್ಲು ತೂರಾಟ ಮತ್ತು ಗಲಭೆ ಪ್ರಕರಣಕ್ಕೆ ಸಂಬಂಧಿಸಿ ಬಂಧಿತರಾಗಿರುವ ಹಿಂದೂ ಕಾರ್ಯಕರ್ತರ ಕುಟುಂಬಗಳನ್ನು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಮಂಗಳವಾರ ಭೇಟಿ ಮಾಡಿ ಧೈರ್ಯ ತು
Byv


ಬಾಗಲಕೋಟೆ, 31 ಮಾರ್ಚ್ (ಹಿ.ಸ.):

ಆ್ಯಂಕರ್:

ಬಾಗಲಕೋಟೆಯಲ್ಲಿ ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಳೆದ ತಿಂಗಳು ನಡೆದ ಕಲ್ಲು ತೂರಾಟ ಮತ್ತು ಗಲಭೆ ಪ್ರಕರಣಕ್ಕೆ ಸಂಬಂಧಿಸಿ ಬಂಧಿತರಾಗಿರುವ ಹಿಂದೂ ಕಾರ್ಯಕರ್ತರ ಕುಟುಂಬಗಳನ್ನು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಮಂಗಳವಾರ ಭೇಟಿ ಮಾಡಿ ಧೈರ್ಯ ತುಂಬಿದರು.

ನಗರದ ಕಿಲ್ಲಾಗಲ್ಲಿಯಲ್ಲಿ ಬಂಧಿತ ಕಾರ್ಯಕರ್ತರ ಪೋಷಕರನ್ನು ಭೇಟಿ ಮಾಡಿದ ಅವರು, ಕುಟುಂಬ ಸದಸ್ಯರಿಗೆ ಸಾಂತ್ವನ ಹೇಳಿ, ಕಾನೂನು ಹೋರಾಟದಲ್ಲಿ ಬಿಜೆಪಿ ಸಂಪೂರ್ಣ ಬೆಂಬಲ ನೀಡುವುದಾಗಿ ಭರವಸೆ ನೀಡಿದರು.

ನಂತರ ಗಲಭೆ ಸಂದರ್ಭ ಗಾಯಗೊಂಡು ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಅಶೋಕ್ ಬಾರಕೇರ ಅವರನ್ನು ಭೇಟಿ ಮಾಡಿದ ವಿಜಯೇಂದ್ರ, ಅವರ ಆರೋಗ್ಯ ವಿಚಾರಿಸಿ ಶೀಘ್ರ ಗುಣಮುಖರಾಗುವಂತೆ ಹಾರೈಸಿದರು.

ಈ ವೇಳೆ ಕಾಂಗ್ರೆಸ್ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ ಅವರು, “ರಾಜ್ಯ ಸರ್ಕಾರಕ್ಕೆ ಓಟ್ ಬ್ಯಾಂಕ್ ತುಷ್ಟೀಕರಣವೇ ಆದ್ಯತೆ. ಆದರೆ ಹಿಂದೂ ಕಾರ್ಯಕರ್ತರ ಪರವಾಗಿ ಬಿಜೆಪಿ ಸದಾ ನಿಲ್ಲಲಿದೆ” ಎಂದು ಹೇಳಿದರು.

ಈ ಸಂದರ್ಭದಲ್ಲಿ ಜಿಲ್ಲಾಧ್ಯಕ್ಷ ಶಾಂತಗೌಡ ಪಾಟೀಲ, ಶಾಸಕರುಗಳಾದ ಶೈಲೇಂದ್ರ ಬೆಲ್ದಾಳೆ, ಪಿ.ಎಚ್. ಪೂಜಾರ್, ಹನುಮಂತ ನಿರಾಣಿ, ಮಾಜಿ ಶಾಸಕರು ಎಂ.ಡಿ. ಲಕ್ಷ್ಮೀನಾರಾಯಣ, ಅರುಣ್ ಶಹಾಪುರ ಹಾಗೂ ರಾಜ್ಯ ಕಾರ್ಯದರ್ಶಿ ಶರಣು ತಳ್ಳಿಕೇರಿ ಸೇರಿದಂತೆ ಪಕ್ಷದ ಮುಖಂಡರು ಉಪಸ್ಥಿತರಿದ್ದರು.

---------------

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande