ಬಾಗಲಕೋಟೆ ಉಪಚುನಾವಣೆ: ಮುಗುಳೊಳ್ಳಿಯಲ್ಲಿ ಸಿಎಂ ಸಿದ್ದರಾಮಯ್ಯ ಪ್ರಚಾರ
ಬಾಗಲಕೋಟೆಯಲ್ಲಿ, 31 ಮಾರ್ಚ್ (ಹಿ.ಸ.) ಆ್ಯಂಕರ್ : ಬಾಗಲಕೋಟೆ ವಿಧಾನಸಭಾ ಕ್ಷೇತ್ರದ ಉಪಚುನಾವಣೆ ಹಿನ್ನೆಲೆಯಲ್ಲಿ ಎರಡನೇ ದಿನವೂ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬಿರುಸಿನ ಪ್ರಚಾರ ಕಾರ್ಯ ನಡೆಸಿದರು. ಬಾಗಲಕೋಟೆ ತಾಲೂಕಿನ ಮುಗುಳೊಳ್ಳಿ ಗ್ರಾಮದಲ್ಲಿ ಆಯೋಜಿಸಿದ್ದ ಪ್ರಚಾರ ಸಭೆಯಲ್ಲಿ ಭಾಗವಹಿಸಿದ ಅವರು
ಸಭೆ


ಬಾಗಲಕೋಟೆಯಲ್ಲಿ, 31 ಮಾರ್ಚ್ (ಹಿ.ಸ.)

ಆ್ಯಂಕರ್ : ಬಾಗಲಕೋಟೆ ವಿಧಾನಸಭಾ ಕ್ಷೇತ್ರದ ಉಪಚುನಾವಣೆ ಹಿನ್ನೆಲೆಯಲ್ಲಿ ಎರಡನೇ ದಿನವೂ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬಿರುಸಿನ ಪ್ರಚಾರ ಕಾರ್ಯ ನಡೆಸಿದರು.

ಬಾಗಲಕೋಟೆ ತಾಲೂಕಿನ ಮುಗುಳೊಳ್ಳಿ ಗ್ರಾಮದಲ್ಲಿ ಆಯೋಜಿಸಿದ್ದ ಪ್ರಚಾರ ಸಭೆಯಲ್ಲಿ ಭಾಗವಹಿಸಿದ ಅವರು, ಕ್ಷೇತ್ರದ ಅಭಿವೃದ್ಧಿಗೆ ದಿವಂಗತ ನಾಯಕ ಹೆಚ್ ವೈ ಮೇಟಿ ಅವರ ಕೊಡುಗೆಗಳನ್ನು ಒಳಗೊಂಡ “ಪ್ರಗತಿಯ ಪಕ್ಷಿನೋಟ” ಎಂಬ ಕೈಪಿಡಿಯನ್ನು ಬಿಡುಗಡೆಗೊಳಿಸಿದರು.

ನಂತರ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಉಮೇಶ್ ಮೇಟಿ ಅವರ ಪರ ಮತಯಾಚನೆ ನಡೆಸಿದರು.

ಸಭೆಯಲ್ಲಿ ಸಚಿವ ಆರ್ಬಿ ತಿಮ್ಮಾಪುರ, ವಿಧಾನ ಪರಿಷತ್ ಮಾಜಿ ಸಭಾಪತಿ ಎಸ್ ಆರ್ ಪಾಟೀಲ್, ಶಾಸಕರಾದ ಯಶವಂತರಾಯಗೌಡ ಪಾಟೀಲ್ ಹಂಪನಗೌಡ ಬದರ್ಲಿ, ವಿಜಯಾನಂದ ಕಾಶೆಪ್ಪನವರ್ ಹಾಗೂ ಮಾಜಿ ಸಚಿವ ಅಜಯಕುಮಾರ್ ಸರನಾಯಕ್ ಸೇರಿದಂತೆ ಹಲವರು ಭಾಗವಹಿಸಿದ್ದರು.

ಈ ವೇಳೆ ಕಾಂಗ್ರೆಸ್ ಮುಖಂಡರು, ಕಾರ್ಯಕರ್ತರು ಹಾಗೂ ಸ್ಥಳೀಯರು ಹೆಚ್ಚಿನ ಸಂಖ್ಯೆಯಲ್ಲಿ ಉಪಸ್ಥಿತರಿದ್ದರು.

---------------

ಹಿಂದೂಸ್ತಾನ್ ಸಮಾಚಾರ್ / jyothi deshpande


 rajesh pande