ಬಾಗಲಕೋಟೆ ನಗರದಲ್ಲಿ ಬಿಜೆಪಿ ಅಭ್ಯರ್ಥಿ ಬಿರುಸಿನ ಪ್ರಚಾರ
ಬಾಗಲಕೋಟೆ, 31 ಮಾರ್ಚ್ (ಹಿ.ಸ.) ಆ್ಯಂಕರ್ : ಬಾಗಲಕೋಟೆ ವಿಧಾನಸಭಾ ಕ್ಷೇತ್ರದ ಉಪಚುನಾವಣೆ ಹಿನ್ನೆಲೆಯಲ್ಲಿ ಬಿಜೆಪಿ ಅಭ್ಯರ್ಥಿ ವೀರಣ್ಣ ಚರಂತಿಮಠ ನಗರದಲ್ಲಿ ಭರ್ಜರಿ ಮತಪ್ರಚಾರ ನಡೆಸಿದರು. ನಗರದ ಕೆರೊಡಿ ಆಸ್ಪತ್ರೆ ಸಮೀಪದ ನಾಗಪ್ಪನ ಕಟ್ಟೆಗೆ ಪೂಜೆ ಸಲ್ಲಿಸಿ ಬಳಿಕ ವಾರ್ಡ್ ನಂ.3ರಲ್ಲಿ ಮನೆಮನೆಗೆ ತೆರ
ಬಿಜೆಪಿ


ಬಾಗಲಕೋಟೆ, 31 ಮಾರ್ಚ್ (ಹಿ.ಸ.)

ಆ್ಯಂಕರ್ : ಬಾಗಲಕೋಟೆ ವಿಧಾನಸಭಾ ಕ್ಷೇತ್ರದ ಉಪಚುನಾವಣೆ ಹಿನ್ನೆಲೆಯಲ್ಲಿ ಬಿಜೆಪಿ ಅಭ್ಯರ್ಥಿ ವೀರಣ್ಣ ಚರಂತಿಮಠ ನಗರದಲ್ಲಿ ಭರ್ಜರಿ ಮತಪ್ರಚಾರ ನಡೆಸಿದರು.

ನಗರದ ಕೆರೊಡಿ ಆಸ್ಪತ್ರೆ ಸಮೀಪದ ನಾಗಪ್ಪನ ಕಟ್ಟೆಗೆ ಪೂಜೆ ಸಲ್ಲಿಸಿ ಬಳಿಕ ವಾರ್ಡ್ ನಂ.3ರಲ್ಲಿ ಮನೆಮನೆಗೆ ತೆರಳಿ ಮತಯಾಚನೆ ಮಾಡಿದರು.

ಈ ವೇಳೆ ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕ ಚಲವಾದಿನಾರಾಯಣಸ್ವಾಮಿ, ತೇರದಾಳ ಶಾಸಕ ಸಿದ್ದು ಸವದಿ, ಪರಿಷತ್ ಸದಸ್ಯ ಹನುಮಂತ ನಿರಾಣಿ, ಮಾಜಿ ಸಚಿವ ಎನ್ ಮಹೇಶ್, ರಾಜ್ಯಸಭಾ ಸದಸ್ಯ ನಾರಾಯಣಸಾ ಭಾಂಡಗೆ ಸೇರಿದಂತೆ ಹಲವರು ಭಾಗವಹಿಸಿದರು.

ಜಿಲ್ಲಾ ಎಸ್.ಟಿ. ಮೋರ್ಚಾ ಅಧ್ಯಕ್ಷ ಮುತ್ತಣ್ಣ ಬೆಣ್ಣೂರ, ಶಿವಾನಂದ ಟವಳಿ, ಎನ್.ಬಿ. ಬಣ್ಣೂರ, ಶಿವಲೀಲಾ ಪಟ್ಟಣಶೆಟ್ಟಿ ಸೇರಿದಂತೆ ಬಿಜೆಪಿ ಮುಖಂಡರು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದು, ಮತದಾರರಲ್ಲಿ ಪಕ್ಷದ ಅಭ್ಯರ್ಥಿಗೆ ಬೆಂಬಲ ಕೋರಿದರು.

---------------

ಹಿಂದೂಸ್ತಾನ್ ಸಮಾಚಾರ್ / jyothi deshpande


 rajesh pande