

ಬಾಗಲಕೋಟೆ, 31 ಮಾರ್ಚ್ (ಹಿ.ಸ.)
ಆ್ಯಂಕರ್ : ಬಾಗಲಕೋಟೆ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಪ್ರಚಾರ ಕಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಬ್ಬರದ ಪ್ರಚಾರದ ನಡುವೆ ಇಂದು ವಿಶೇಷ ಘಟನೆ ಗಮನ ಸೆಳೆಯಿತು.
ಬಾಗಲಕೋಟೆ ತಾಲೂಕಿನ ಮುಗಳೊಳ್ಳಿ ಗ್ರಾಮದಲ್ಲಿ ಪ್ರಚಾರ ನಡೆಸಿದ ವೇಳೆ ಗ್ರಾಮಸ್ಥರು ಸಿಎಂ ಅವರಿಗೆ ‘ಟಗರು’ ಉಡುಗೊರೆಯಾಗಿ ನೀಡಿ ತಮ್ಮ ಅಭಿಮಾನವನ್ನು ವ್ಯಕ್ತಪಡಿಸಿದರು.
ಮುಗಳೊಳ್ಳಿ ಗ್ರಾಮದಲ್ಲಿ ನಡೆದ ಸಭೆಯಲ್ಲಿ ಗ್ರಾಮಸ್ಥರು ಕಂಬಳಿ ಹೊದಿಸಿ, ಹೂವಿನ ಹಾರ ಹಾಕಿ ಸಿಎಂ ಅವರನ್ನು ಭವ್ಯವಾಗಿ ಸನ್ಮಾನಿಸಿದರು.
ಬಳಿಕ ಸಿದ್ದರಾಮಯ್ಯ ಅವರ ಗುರುತಿನ ಚಿಹ್ನೆಯಾಗಿ ಪರಿಗಣಿಸಲ್ಪಡುವ ‘ಟಗರು’ನ್ನು ಉಡುಗೊರೆಯಾಗಿ ನೀಡಿದ್ದು ಸಭೆಯಲ್ಲಿ ಭಾಗವಹಿಸಿದ್ದವರ ಗಮನ ಸೆಳೆಯಿತು.
ಬಾಗಲಕೋಟೆ ಉಪಚುನಾವಣೆಯ ಪ್ರಚಾರದ ಎರಡನೇ ದಿನವೂ ಸಿಎಂ ಸಿದ್ದರಾಮಯ್ಯ ವಿವಿಧ ಗ್ರಾಮಗಳಲ್ಲಿ ಭೇಟಿ ನೀಡಿ ಮತಯಾಚನೆ ನಡೆಸಿದರು. ಈ ವೇಳೆ ಜನರು ಹೆಚ್ಚಿನ ಸಂಖ್ಯೆಯಲ್ಲಿ ಸೇರಿ ಕಾಂಗ್ರೆಸ್ ಅಭ್ಯರ್ಥಿಗೆ ಬೆಂಬಲ ವ್ಯಕ್ತಪಡಿಸಿದರು.
ಪ್ರಚಾರ ಕಾರ್ಯಕ್ರಮದಲ್ಲಿ ಸಚಿವ ಆರ್ ಬಿ ತಿಮ್ಮಾಪುರ, ಮಾಜಿ ಸಚಿವ ಎಸ್ ಆರ್ ಪಾಟೀಲ್, ಶಾಸಕ ಯಶವಂತರಾಯಗೌಡ ಪಾಟೀಲ್ ಸೇರಿದಂತೆ ಹಲವಾರು ಕಾಂಗ್ರೆಸ್ ನಾಯಕರು ಭಾಗವಹಿಸಿ ಸಿಎಂ ಅವರಿಗೆ ಸಾಥ್ ನೀಡಿದರು.
ಸಭೆಯಲ್ಲಿ ನೆರೆದಿದ್ದ ಜನಸ್ತೋಮ ಜೈಕಾರ ಹಾಕುವ ಮೂಲಕ ಕಾಂಗ್ರೆಸ್ ಅಭ್ಯರ್ಥಿ ಪರ ಬೆಂಬಲ ಸೂಚಿಸಿತು.
---------------
ಹಿಂದೂಸ್ತಾನ್ ಸಮಾಚಾರ್ / jyothi deshpande