
ಬಾಗಲಕೋಟೆ, 31 ಮಾರ್ಚ್ (ಹಿ.ಸ.)
ಆ್ಯಂಕರ್ : ಬಾಗಲಕೋಟೆ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಅಂಗವಾಗಿ ನೀಲಾನಗರ ಗ್ರಾಮದಲ್ಲಿ ಸಚಿವ ಶಿವಾನಂದ ಪಾಟೀಲ್ ಕಾಂಗ್ರೆಸ್ ಅಭ್ಯರ್ಥಿ ಪರ ಪ್ರಚಾರ ಭರ್ಜರಿಯಾಗಿ ನಡೆಸಿದರು.
ಈ ವೇಳೆ ಕಾಂಗ್ರೆಸ್ ಅಭ್ಯರ್ಥಿ ಉಮೇಶ್ ಮೇಟಿ ಪರವಾಗಿ ಮತಯಾಚನೆ ನಡೆಸಿದ ಅವರು,
ಗ್ರಾಮದಲ್ಲಿ ನಡೆದ ಪ್ರಚಾರ ಕಾರ್ಯಕ್ರಮದಲ್ಲಿ ಸ್ಥಳೀಯ ಕಾಂಗ್ರೆಸ್ ಮುಖಂಡರು ಹಾಗೂ ನೂರಾರು ಕಾರ್ಯಕರ್ತರು ಭಾಗವಹಿಸಿ ಮನೆಮನೆಗೆ ತೆರಳಿ ಮತದಾರರ ಬೆಂಬಲ ಕೋರಿದರು.
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನೇತೃತ್ವದ ಕಾಂಗ್ರೆಸ್ ಸರ್ಕಾರ ಜಾರಿಗೆ ತಂದಿರುವ ಜನಪರ ಯೋಜನೆಗಳು ಮತ್ತು ಗ್ಯಾರಂಟಿ ಯೋಜನೆಗಳಿಂದ ಬಡಜನರಿಗೆ ಆರ್ಥಿಕ ಭದ್ರತೆ ದೊರಕಿದ್ದು, ಈ ಯೋಜನೆಗಳು ಜನರ ಬದುಕಿನಲ್ಲಿ ಮಹತ್ತರ ಬದಲಾವಣೆ ತಂದಿವೆ ಎಂದು ಈ ವೇಳೆ ಹೇಳಿದರು.
ಕ್ಷೇತ್ರದ ಸಮಗ್ರ ಅಭಿವೃದ್ಧಿ ಹಾಗೂ ಜನಸಾಮಾನ್ಯರ ಸಮಸ್ಯೆಗಳಿಗೆ ಸ್ಪಂದಿಸುವ ನಾಯಕತ್ವ ನೀಡಲು ಕಾಂಗ್ರೆಸ್ ಅಭ್ಯರ್ಥಿ ಉಮೇಶ್ ಮೇಟಿ ಅವರಿಗೆ ಭಾರಿ ಬಹುಮತದಿಂದ ಗೆಲುವು ತಂದುಕೊಡಬೇಕೆಂದು ಮತದಾರರಲ್ಲಿ ಮನವಿ ಮಾಡಿದರು.
ಈ ಸಂದರ್ಭದಲ್ಲಿ ಸ್ಥಳೀಯ ಕಾಂಗ್ರೆಸ್ ಮುಖಂಡರು, ಕಾರ್ಯಕರ್ತರು ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು.
---------------
ಹಿಂದೂಸ್ತಾನ್ ಸಮಾಚಾರ್ / jyothi deshpande