
ಬಾಗಲಕೋಟೆಯಲ್ಲಿ, 31 ಮಾರ್ಚ್ (ಹಿ.ಸ.):
ಆ್ಯಂಕರ್ : ಬಾಗಲಕೋಟೆ ವಿಧಾನಸಭಾ ಕ್ಷೇತ್ರದ ಉಪಚುನಾವಣೆ ಹಿನ್ನೆಲೆಯಲ್ಲಿ ನಡೆದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪ್ರಚಾರ ಸಭೆಯಲ್ಲಿ ಸರ್ಕಾರಿ ಶಾಲಾ ಶಿಕ್ಷಕ ಭಾಗವಹಿಸಿದ್ದರಿಂದ ಚುನಾವಣಾ ನೀತಿ ಸಂಹಿತೆ ಉಲ್ಲಂಘನೆಯ ಆರೋಪ ಕೇಳಿಬಂದಿದೆ.
ಬಾಗಲಕೋಟೆ ತಾಲೂಕಿನ ಸುತಗುಂಡಾರ ಗ್ರಾಮದಲ್ಲಿ ನಡೆದ ಈ ಸಭೆಯಲ್ಲಿ ಸರ್ಕಾರಿ ಪ್ರಾಥಮಿಕ ಶಾಲೆಯ ಸಹಶಿಕ್ಷಕರಾಗಿರುವ ಹಾಗೂ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ರಾಜ್ಯಾಧ್ಯಕ್ಷರಾದ ಚಂದ್ರು ನುಗ್ಲಿ ಹಾಜರಿದ್ದದ್ದು ಗಮನಕ್ಕೆ ಬಂದಿದೆ. ಅವರು ವಿಜಯಪುರ ಜಿಲ್ಲೆಯ ಆಲಮಟ್ಟಿ ಎಂಪಿಎಸ್ ಶಾಲೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ.
ಕಾಂಗ್ರೆಸ್ ಅಭ್ಯರ್ಥಿ ಉಮೇಶ್ ಮೇಟಿ ಪರ ನಡೆದ ಪ್ರಚಾರದಲ್ಲಿ ಚಂದ್ರು ನುಗ್ಲಿ ಭಾಗವಹಿಸಿರುವುದು ಮಾಧ್ಯಮಗಳ ಗಮನಕ್ಕೆ ಬಂದಿದೆ.
ಈ ಕುರಿತು ಮಾಧ್ಯಮಗಳು ಪ್ರಶ್ನಿಸಿದಾಗ ಅವರು ಸ್ಥಳದಿಂದ ತಕ್ಷಣ ಪಲಾಯನ ಮಾಡಿರುವ ದೃಶ್ಯಗಳು ಸೆರೆಯಾಗಿವೆ.
ಸರಕಾರಿ ನೌಕರರನ್ನು ಚುನಾವಣಾ ಪ್ರಚಾರಕ್ಕೆ ಬಳಸಿಕೊಂಡಿರುವ ಈ ಘಟನೆ ಚುನಾವಣಾ ನೀತಿ ಸಂಹಿತೆ ಉಲ್ಲಂಘನೆಯಾಗಿದ್ದು ಕ್ರಮ ಕೈಗೊಳ್ಳಲು ಬಿಜೆಪಿ ಆಗ್ರಹಿಸಿದೆ.
---------------
ಹಿಂದೂಸ್ತಾನ್ ಸಮಾಚಾರ್ / jyothi deshpande