ಬಡವರಿಗೆ ಹಣ ಕೊಟ್ಟಿರುವುದನ್ನು ನೋಡಿ ಬಿಜೆಪಿಗೆ ಸಹಿಸಲಾಗುತ್ತಿಲ್ಲ: ಯತೀಂದ್ರ ಸಿದ್ದರಾಮಯ್ಯ
ಬಾಗಲಕೋಟೆ, 31 ಮಾರ್ಚ್ (ಹಿ.ಸ.) ಆ್ಯಂಕರ್ : ಬಾಗಲಕೋಟೆ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಹಿನ್ನೆಲೆ ಕಾಂಗ್ರೆಸ್ ಅಭ್ಯರ್ಥಿ ಪರ ಪ್ರಚಾರ ಬಿರುಸುಗೊಂಡಿದ್ದು, ಮನ್ನಿಕಟ್ಟಿ ಗ್ರಾಮದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪರ ಮತಯಾಚನೆ ನಡೆಯಿತು. ಈ ಸಂದರ್ಭದಲ್ಲಿ ಮಾತನಾಡಿದ ಯತೀಂದ್ರ ಸಿದ್ದರಾಮಯ್ಯ ಅವರು, ರಾಜ್ಯ
ಯತೀಂದ್ರ


ಬಾಗಲಕೋಟೆ, 31 ಮಾರ್ಚ್ (ಹಿ.ಸ.)

ಆ್ಯಂಕರ್ : ಬಾಗಲಕೋಟೆ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಹಿನ್ನೆಲೆ ಕಾಂಗ್ರೆಸ್ ಅಭ್ಯರ್ಥಿ ಪರ ಪ್ರಚಾರ ಬಿರುಸುಗೊಂಡಿದ್ದು, ಮನ್ನಿಕಟ್ಟಿ ಗ್ರಾಮದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪರ ಮತಯಾಚನೆ ನಡೆಯಿತು.

ಈ ಸಂದರ್ಭದಲ್ಲಿ ಮಾತನಾಡಿದ ಯತೀಂದ್ರ ಸಿದ್ದರಾಮಯ್ಯ ಅವರು, ರಾಜ್ಯ ಸರ್ಕಾರ ಬಡವರ ಕಲ್ಯಾಣಕ್ಕಾಗಿ ವಿವಿಧ ಯೋಜನೆಗಳ ಮೂಲಕ ಆರ್ಥಿಕ ನೆರವು ನೀಡುತ್ತಿರುವುದನ್ನು ಕಂಡು ಬಿಜೆಪಿಯವರಿಗೆ ಸಹಿಸಿಕೊಳ್ಳಲು ಆಗುತ್ತಿಲ್ಲ ಎಂದು ಟೀಕಿಸಿದರು.

ಸರ್ಕಾರದ ಯೋಜನೆಗಳಿಂದ ಸಾಮಾನ್ಯ ಜನರಿಗೆ ನೇರವಾಗಿ ಪ್ರಯೋಜನವಾಗುತ್ತಿದ್ದು, ಅದನ್ನು ವಿರೋಧ ಪಕ್ಷಗಳು ಸಹಿಸಿಕೊಳ್ಳಲಾಗದೆ ಅನಾವಶ್ಯಕ ಆರೋಪಗಳನ್ನು ಮಾಡುತ್ತಿವೆ ಎಂದು ಹೇಳಿದರು.

ಬಾಗಲಕೋಟೆ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಉಮೇಶ್ ಮೇಟಿ ಅವರ ಪರವಾಗಿ ಮತಯಾಚನೆ ನಡೆಸಿದ ಅವರು, ಜನರು ಅಭಿವೃದ್ಧಿ ಮತ್ತು ಜನಪರ ಆಡಳಿತವನ್ನು ಗಮನದಲ್ಲಿಟ್ಟುಕೊಂಡು ಕಾಂಗ್ರೆಸ್ ಪಕ್ಷಕ್ಕೆ ಬೆಂಬಲ ನೀಡುವಂತೆ ಮನವಿ ಮಾಡಿದರು.

ಪ್ರಚಾರ ಸಂದರ್ಭದಲ್ಲಿ ಕಾಂಗ್ರೆಸ್ ಮುಖಂಡರು, ಕಾರ್ಯಕರ್ತರು ಹಾಗೂ ಗ್ರಾಮಸ್ಥರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿದ್ದರು.

---------------

ಹಿಂದೂಸ್ತಾನ್ ಸಮಾಚಾರ್ / jyothi deshpande


 rajesh pande