ಬಾದಾಮಿ ತಾಲೂಕಿನ ಸುಳ್ಳ ಗ್ರಾಮದಲ್ಲಿ ಮಹಿಳೆಯ ಅನಾಥ ಶವ ಪತ್ತೆ
ಬಾಗಲಕೋಟೆ, 31 ಮಾರ್ಚ್ (ಹಿ.ಸ.) ಆ್ಯಂಕರ್ : ಬಾಗಲಕೋಟೆ ಜಿಲ್ಲೆಯ ಬಾದಾಮಿ ತಾಲೂಕಿನ ಸುಳ್ಳ ಗ್ರಾಮದಲ್ಲಿ ಮಹಿಳೆಯೊಬ್ಬರ ಅನಾಥ ಶವ ಪತ್ತೆಯಾದ ಘಟನೆ ಮಂಗಳವಾರ ಬೆಳಕಿಗೆ ಬಂದಿದೆ. ಸುಳ್ಳ ಗ್ರಾಮದ ಗುಡ್ಡದ ಬುತ್ತಿ ಬಸವಣ್ಣನ ಗುಡಿ ಸಮೀಪದಲ್ಲಿ ಸುಮಾರು 56 ವರ್ಷದ ಮಲ್ಲವ್ವ ದಾಸರ ಎಂಬ ಮಹಿಳೆಯ ಶವ ಪತ್ತೆಯಾಗ
ಶವ


ಬಾಗಲಕೋಟೆ, 31 ಮಾರ್ಚ್ (ಹಿ.ಸ.)

ಆ್ಯಂಕರ್ : ಬಾಗಲಕೋಟೆ ಜಿಲ್ಲೆಯ ಬಾದಾಮಿ ತಾಲೂಕಿನ ಸುಳ್ಳ ಗ್ರಾಮದಲ್ಲಿ ಮಹಿಳೆಯೊಬ್ಬರ ಅನಾಥ ಶವ ಪತ್ತೆಯಾದ ಘಟನೆ ಮಂಗಳವಾರ ಬೆಳಕಿಗೆ ಬಂದಿದೆ.

ಸುಳ್ಳ ಗ್ರಾಮದ ಗುಡ್ಡದ ಬುತ್ತಿ ಬಸವಣ್ಣನ ಗುಡಿ ಸಮೀಪದಲ್ಲಿ ಸುಮಾರು 56 ವರ್ಷದ ಮಲ್ಲವ್ವ ದಾಸರ ಎಂಬ ಮಹಿಳೆಯ ಶವ ಪತ್ತೆಯಾಗಿದೆ ಎಂದು ತಿಳಿದು ಬಂದಿದೆ.

ಸ್ಥಳೀಯರು ಗಮನಿಸಿ ಪೊಲೀಸರಿಗೆ ಮಾಹಿತಿ ನೀಡಿದ ಹಿನ್ನೆಲೆಯಲ್ಲಿ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಘಟನೆಯ ಮಾಹಿತಿ ತಿಳಿದು ಸ್ಥಳಕ್ಕೆ ಬಾದಾಮಿ ಪೊಲೀಸ್ ಠಾಣೆಯ ಪಿಎಸ್ಐ ಹನುಮಂತ ನರಳೆ ಹಾಗೂ ಸಿಬ್ಬಂದಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಶವವನ್ನು ಮುಂದಿನ ಕ್ರಮಗಳಿಗಾಗಿ ಆಸ್ಪತ್ರೆಗೆ ರವಾನಿಸಲಾಗಿದ್ದು, ಪ್ರಕರಣದ ಕುರಿತು ಪೊಲೀಸರು ತನಿಖೆ ಕೈಗೊಂಡಿದ್ದಾರೆ.

ಈ ಕುರಿತು ಬಾದಾಮಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಸಾವಿನ ನಿಖರ ಕಾರಣ ತಿಳಿದು ಬರಲು ತನಿಖೆ ಮುಂದುವರಿದಿದೆ.

---------------

ಹಿಂದೂಸ್ತಾನ್ ಸಮಾಚಾರ್ / jyothi deshpande


 rajesh pande