ಸಿಂದಗಿ ಬಳಿ ಭೀಕರ ರಸ್ತೆ ಅಪಘಾತ: ಬೆಂಕಿಯ ಕೆನ್ನಾಲಿಗೆಗೆ ಬೈಕ್ ಸವಾರ ಬಲಿ
ವಿಜಯಪುರ, 31 ಮಾರ್ಚ್ (ಹಿ.ಸ.) ಆ್ಯಂಕರ್ : ವಿಜಯಪುರ ಜಿಲ್ಲೆಯ ಸಿಂದಗಿ ತಾಲೂಕಿನ ಕನ್ನೊಳ್ಳಿ ಟೋಲ್ಗೇಟ್ ಸಮೀಪ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಬೈಕ್ ಸವಾರ ಸಜೀವ ದಹನಗೊಂಡು ಸಾವನ್ನಪ್ಪಿದ ದುರ್ಘಟನೆ ನಡೆದಿದೆ. ಖಾಸಗಿ ಬಸ್ ಹಾಗೂ ಬೈಕ್ ನಡುವೆ ನಡೆದ ಮುಖಾಮುಖಿ ಡಿಕ್ಕಿಯಿಂದಾಗಿ ಈ ದುರಂತ ಸಂಭವ
ಅಪಘಾತ


ವಿಜಯಪುರ, 31 ಮಾರ್ಚ್ (ಹಿ.ಸ.)

ಆ್ಯಂಕರ್ : ವಿಜಯಪುರ ಜಿಲ್ಲೆಯ ಸಿಂದಗಿ ತಾಲೂಕಿನ ಕನ್ನೊಳ್ಳಿ ಟೋಲ್ಗೇಟ್ ಸಮೀಪ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಬೈಕ್ ಸವಾರ ಸಜೀವ ದಹನಗೊಂಡು ಸಾವನ್ನಪ್ಪಿದ ದುರ್ಘಟನೆ ನಡೆದಿದೆ.

ಖಾಸಗಿ ಬಸ್ ಹಾಗೂ ಬೈಕ್ ನಡುವೆ ನಡೆದ ಮುಖಾಮುಖಿ ಡಿಕ್ಕಿಯಿಂದಾಗಿ ಈ ದುರಂತ ಸಂಭವಿಸಿದೆ. ಮೃತ ವ್ಯಕ್ತಿಯನ್ನು ದೇವರಹಿಪ್ಪರಗಿ ತಾಲೂಕಿನ ಮುಳಸಾವಳಗಿ ಗ್ರಾಮದ ನಿವಾಸಿ ಅಭಿಷೇಕ್ ಸಾಯಬಾಗೌಡ ನಾಗರಾಳ (22) ಎಂದು ಗುರುತಿಸಲಾಗಿದೆ.

ಡಿಕ್ಕಿಯ ರಭಸಕ್ಕೆ ಬೈಕ್ನ ಪೆಟ್ರೋಲ್ ಟ್ಯಾಂಕ್ ಸ್ಫೋಟಗೊಂಡು ಬೆಂಕಿ ಹೊತ್ತಿಕೊಂಡಿದ್ದು, ಕ್ಷಣಾರ್ಧದಲ್ಲಿ ಬೈಕ್ ಸಂಪೂರ್ಣವಾಗಿ ಅಗ್ನಿಗಾಹುತಿಯಾಗಿದೆ. ಬೆಂಕಿಯ ತೀವ್ರತೆಗೆ ಬೈಕ್ ಸವಾರನಿಗೆ ತಪ್ಪಿಸಿಕೊಳ್ಳಲು ಅವಕಾಶವೇ ಸಿಗದೆ ಸ್ಥಳದಲ್ಲೇ ಸಜೀವ ದಹನಗೊಂಡಿದ್ದಾರೆ.

ಅಪಘಾತದ ತೀವ್ರತೆಗೆ ಖಾಸಗಿ ಬಸ್ ಕೂಡ ಕ್ಷಣಾರ್ಧದಲ್ಲಿ ಬೆಂಕಿಗಾಹುತಿಯಾಗಿದ್ದು, ಇಡೀ ಬಸ್ ಬೆಂಕಿಯ ಉಂಡೆಯಾಗಿ ಮಾರ್ಪಟ್ಟಿತ್ತು. ಆದರೆ ಬೆಂಕಿ ಬಸ್ಗೆ ಸಂಪೂರ್ಣವಾಗಿ ಆವರಿಸುವ ಮೊದಲು ಚಾಲಕ ತೋರಿದ ಸಮಯಪ್ರಜ್ಞೆ ಹಾಗೂ ಪ್ರಯಾಣಿಕರು ತಕ್ಷಣ ಬಸ್ನಿಂದ ಹೊರಬಂದ ಪರಿಣಾಮ ದೊಡ್ಡ ಅನಾಹುತ ತಪ್ಪಿದೆ. ಬಸ್ನಲ್ಲಿದ್ದ ಎಲ್ಲಾ ಪ್ರಯಾಣಿಕರು ಕೂದಲೆಳೆ ಅಂತರದಲ್ಲಿ ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಸುದ್ದಿ ತಿಳಿದ ತಕ್ಷಣ ಸ್ಥಳಕ್ಕೆ ಧಾವಿಸಿದ ಸಿಂದಗಿ ಅಗ್ನಿಶಾಮಕ ದಳದ ಸಿಬ್ಬಂದಿ ಬೆಂಕಿ ನಂದಿಸುವಲ್ಲಿ ಯಶಸ್ವಿಯಾದರು. ನಂತರ ಸಿಂದಗಿ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಈ ಕುರಿತು ಸಿಂದಗಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

---------------

ಹಿಂದೂಸ್ತಾನ್ ಸಮಾಚಾರ್ / jyothi deshpande


 rajesh pande