ರೈತರಿಂದ ಜಿಲ್ಲಾ ಉಸ್ತುವಾರಿ ಸಚಿವರ ಮನೆಗೆ ಮುತ್ತಿಗೆ
ಬಾಗಲಕೋಟೆ, 31 ಮಾರ್ಚ್ (ಹಿ.ಸ.) ಆ್ಯಂಕರ್ : ಕಬ್ಬು ದರ ನಿಗದಿ ಹಾಗೂ ಬಾಕಿ ಪಾವತಿ ವಿಚಾರವಾಗಿ ನಡೆದ ಹೋರಾಟದ ವೇಳೆ ರೈತ ಮುಖಂಡರ ಮೇಲೆ ದಾಖಲಿಸಿರುವ ಗಂಭೀರ ಪ್ರಕರಣಗಳನ್ನು ರದ್ದುಗೊಳಿಸಬೇಕೆಂದು ಆಗ್ರಹಿಸಿ ರೈತರು ಬಾಗಲಕೋಟೆ ಜಿಲ್ಲೆಯ ಮುಧೋಳ ನಗರದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಆರ್.ಬಿ.ತಿಮ್ಮಾಪುರ ಅ
ರೈತ


ರೈತ


ಬಾಗಲಕೋಟೆ, 31 ಮಾರ್ಚ್ (ಹಿ.ಸ.)

ಆ್ಯಂಕರ್ : ಕಬ್ಬು ದರ ನಿಗದಿ ಹಾಗೂ ಬಾಕಿ ಪಾವತಿ ವಿಚಾರವಾಗಿ ನಡೆದ ಹೋರಾಟದ ವೇಳೆ ರೈತ ಮುಖಂಡರ ಮೇಲೆ ದಾಖಲಿಸಿರುವ ಗಂಭೀರ ಪ್ರಕರಣಗಳನ್ನು ರದ್ದುಗೊಳಿಸಬೇಕೆಂದು ಆಗ್ರಹಿಸಿ ರೈತರು ಬಾಗಲಕೋಟೆ ಜಿಲ್ಲೆಯ ಮುಧೋಳ ನಗರದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಆರ್.ಬಿ.ತಿಮ್ಮಾಪುರ ಅವರ ನಿವಾಸಕ್ಕೆ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಿದರು.

ಕಬ್ಬು ಬೆಳೆಗಾರರ ಸಮಸ್ಯೆಗಳನ್ನು ತಕ್ಷಣ ಪರಿಹರಿಸಬೇಕು ಹಾಗೂ ಹೋರಾಟದ ವೇಳೆ ರೈತ ಮುಖಂಡರ ವಿರುದ್ಧ ದಾಖಲಾಗಿರುವ ಪ್ರಕರಣಗಳನ್ನು ಹಿಂಪಡೆಯಬೇಕು ಎಂದು ಪ್ರತಿಭಟನಾಕಾರರು ಆಗ್ರಹಿಸಿದರು.

ಸಚಿವರ ನಿವಾಸದ ಮುಂದೆ ಸೇರಿದ್ದ ರೈತರು ಘೋಷಣೆ ಹಾಕಿ ಆಕ್ರೋಶ ವ್ಯಕ್ತಪಡಿಸಿದರು. ಸ್ಥಳಕ್ಕೆ ಪೊಲೀಸರು ಭದ್ರತೆ ಒದಗಿಸಿದ್ದು, ಪರಿಸ್ಥಿತಿ ನಿಯಂತ್ರಣದಲ್ಲಿದೆ ಎಂದು ತಿಳಿದುಬಂದಿದೆ. ರೈತ ಮುಖಂಡರು ಸರ್ಕಾರ ತಕ್ಷಣ ಸ್ಪಂದಿಸಿ ರೈತರ ಬೇಡಿಕೆಗಳನ್ನು ಈಡೇರಿಸಬೇಕೆಂದು ಒತ್ತಾಯಿಸಿದರು.

---------------

ಹಿಂದೂಸ್ತಾನ್ ಸಮಾಚಾರ್ / jyothi deshpande


 rajesh pande