ನಾಳೆಯಿಂದ ಸಹಕಾರ ಸಂಘಗಳ ಸಮೀಕ್ಷೆ
ಬಳ್ಳಾರಿ, 31 ಮಾರ್ಚ್ (ಹಿ.ಸ.) ಆ್ಯಂಕರ್: ನಿಖರವಾದ ಅಂಕಿ-ಅಂಶಗಳನ್ನು ಸಂಗ್ರಹಿಸುವ ನಿಟ್ಟಿನಲ್ಲಿ ರಾಷ್ಟ್ರೀಯ ಸಾಂಖ್ಯಿಕ ಕಾರ್ಯಾಲಯವು ಸಹಕಾರ ಸಂಘಗಳ ಸಮೀಕ್ಷೆಯನ್ನು ಕೈಗೆತ್ತಿಕೊಳ್ಳುತ್ತಿದ್ದು, ಈ ಸಮೀಕ್ಷೆಯು ಅತ್ಯಂತ ಮಹತ್ವದ್ದಾಗಿದೆ ಎಂದು ಬೆಳಗಾವಿ ವಿಭಾಗದ ಸಹಕಾರ ಸಂಘಗಳ ಜಂಟಿ ನಿಬಂಧಕ ಕಲಪ್ಪ ಒಬ
ಏ.01 ರಿಂದ ಸಹಕಾರ ಸಂಘಗಳ ಸಮೀಕ್ಷೆ


ಏ.01 ರಿಂದ ಸಹಕಾರ ಸಂಘಗಳ ಸಮೀಕ್ಷೆ


ಬಳ್ಳಾರಿ, 31 ಮಾರ್ಚ್ (ಹಿ.ಸ.)

ಆ್ಯಂಕರ್: ನಿಖರವಾದ ಅಂಕಿ-ಅಂಶಗಳನ್ನು ಸಂಗ್ರಹಿಸುವ ನಿಟ್ಟಿನಲ್ಲಿ ರಾಷ್ಟ್ರೀಯ ಸಾಂಖ್ಯಿಕ ಕಾರ್ಯಾಲಯವು ಸಹಕಾರ ಸಂಘಗಳ ಸಮೀಕ್ಷೆಯನ್ನು ಕೈಗೆತ್ತಿಕೊಳ್ಳುತ್ತಿದ್ದು, ಈ ಸಮೀಕ್ಷೆಯು ಅತ್ಯಂತ ಮಹತ್ವದ್ದಾಗಿದೆ ಎಂದು ಬೆಳಗಾವಿ ವಿಭಾಗದ ಸಹಕಾರ ಸಂಘಗಳ ಜಂಟಿ ನಿಬಂಧಕ ಕಲಪ್ಪ ಒಬಣ್ಣಗೋಳ ಅವರು ತಿಳಿಸಿದರು.

ಹುಬ್ಬಳ್ಳಿ ನಗರದ ರಾಷ್ಟ್ರೀಯ ಸಾಂಖ್ಯಿಕ ಕಾರ್ಯಾಲಯದ ಸಭಾ ಭವನದಲ್ಲಿ ಆಯೋಜಿಸಲಾಗಿದ್ದ ‘ಸಹಕಾರ ಸಂಘಗಳ ತ್ವರಿತ ಸಮೀಕ್ಷೆ'ಯ ತರಬೇತಿ ಶಿಬಿರ ಉದ್ಘಾಟಿಸಿ ಅವರು ಮಾತನಾಡಿದರು.

ದೇಶದ ಆರ್ಥಿಕ ಪ್ರಗತಿ ಮತ್ತು ಉದ್ಯೋಗ ಸೃಷ್ಟಿಯಲ್ಲಿ ಸಹಕಾರ ಸಂಘಗಳ ಪಾತ್ರವೇನು ಎಂಬುದನ್ನು ತಿಳಿಯಲು ಈ ಸಮೀಕ್ಷೆ ಸಹಕಾರಿಯಾಗಲಿದೆ. ಈ ಸಮೀಕ್ಷೆಗೆ ಸಹಕಾರ ಇಲಾಖೆಯು ಸಂಪೂರ್ಣ ಸಹಕಾರ ನೀಡಲಿದೆ ಎಂದರು.

ಕಾರ್ಯಾಲಯದ ನಿರ್ದೇಶಕ ಹರೀಶ್ವರನ್ ಅವರು ಮಾತನಾಡಿ, ಸಹಕಾರ ಸಂಘಗಳ ಕುರಿತಾದ ಸಮೀಕ್ಷೆಯು ಇದೇ ಮೊದಲ ಬಾರಿಗೆ ನಡೆಯುತ್ತಿದೆ. ಈ ವೇಳೆ ಸಂಘಗಳ ಒಟ್ಟು ಮೌಲ್ಯ ವರ್ಧನೆ, ಒಟ್ಟು ಉತ್ಪಾದನಾ ಮೌಲ್ಯ ಹಾಗೂ ಉದ್ಯೋಗದ ಕುರಿತಾದ ಸಮಗ್ರ ಮಾಹಿತಿಯನ್ನು ಸಂಗ್ರಹಿಸಲಾಗುವುದು ಎಂದರು.

ಕೇಂದ್ರ ಸಹಕಾರ ಸಚಿವಾಲಯದ ಕೋರಿಕೆಯಂತೆ ಈ ಸಮೀಕ್ಷೆ ನಡೆಯುತ್ತಿದ್ದು, ಏಪ್ರಿಲ್ 1 ರಿಂದ ಆರಂಭಗೊಂಡು ಮುಂಬರುವ ಸೆಪ್ಟೆಂಬರ್ ವೇಳೆಗೆ ಪೂರ್ಣಗೊಳ್ಳಲಿದೆ ಎಂದರು.

ಈ ತರಬೇತಿ ಶಿಬಿರದಲ್ಲಿ ಬೆಳಗಾವಿ ಉಪ ಪ್ರಾದೇಶಿಕ ಕಾರ್ಯಾಲಯದ ಸಹಾಯಕ ನಿರ್ದೇಶಕ ಮೋಹನ ಕಾರ್ಜೋಳ ಸೇರಿದಂತೆ ಹುಬ್ಬಳ್ಳಿ, ಬೆಳಗಾವಿ, ಬಳ್ಳಾರಿ ಹಾಗೂ ಕಲಬುರಗಿ ಕಾರ್ಯಾಲಯಗಳ ಹಿರಿಯ ತಾಂತ್ರಿಕ ಅಧಿಕಾರಿಗಳು ಉಪಸ್ಥಿತರಿದ್ದರು.

ಸಹಾಯಕ ನಿರ್ದೇಶಕ ಪ್ರಮೋದ ಪಂಡಿತ ಅವರು ಸ್ವಾಗತಿಸಿದರು. ಉಪನಿರ್ದೇಶಕ ಮಹದೇವಪ್ಪ ವಂದಿಸಿದರು.

---------------

ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್


 rajesh pande