ಸುಧೀಂದ್ರ ತೀರ್ಥ ಸ್ವಾಮೀಜಿ ಜನ್ಮ ಶತಮಾನೋತ್ಸವ: ಪ್ರಧಾನಿ ಮೋದಿ ನಮನ
ನವದೆಹಲಿ, 31 ಮಾರ್ಚ್ (ಹಿ.ಸ.): ಆ್ಯಂಕರ್: ಶ್ರೀಮದ್ ಸುಧೀಂದ್ರ ತೀರ್ಥ ಸ್ವಾಮೀಜಿ ಅವರ ಜನ್ಮ ಶತಮಾನೋತ್ಸವದ ಅಂಗವಾಗಿ ಪ್ರಧಾನಿ ನರೇಂದ್ರ ಮೋದಿ ಅವರು ಮಂಗಳವಾರ ಗೌರವ ನಮನ ಸಲ್ಲಿಸಿದರು. ಪ್ರಧಾನಿಯವರು ಸಾಮಾಜಿಕ ಜಾಲತಾಣ ಎಕ್ಸ ನಲ್ಲಿ ಬರೆದಿರುವ ಸಂದೇಶದಲ್ಲಿ, “ವಾರಾಣಸಿಯ ಶ್ರೀ ಕಾಶಿ ಮಠ ಸಂಸ್ಥಾನದ ಸ
Pm


ನವದೆಹಲಿ, 31 ಮಾರ್ಚ್ (ಹಿ.ಸ.):

ಆ್ಯಂಕರ್:

ಶ್ರೀಮದ್ ಸುಧೀಂದ್ರ ತೀರ್ಥ ಸ್ವಾಮೀಜಿ ಅವರ ಜನ್ಮ ಶತಮಾನೋತ್ಸವದ ಅಂಗವಾಗಿ ಪ್ರಧಾನಿ ನರೇಂದ್ರ ಮೋದಿ ಅವರು ಮಂಗಳವಾರ ಗೌರವ ನಮನ ಸಲ್ಲಿಸಿದರು.

ಪ್ರಧಾನಿಯವರು ಸಾಮಾಜಿಕ ಜಾಲತಾಣ ಎಕ್ಸ ನಲ್ಲಿ ಬರೆದಿರುವ ಸಂದೇಶದಲ್ಲಿ, “ವಾರಾಣಸಿಯ ಶ್ರೀ ಕಾಶಿ ಮಠ ಸಂಸ್ಥಾನದ ಸುಧೀಂದ್ರ ತೀರ್ಥ ಸ್ವಾಮೀಜಿಯವರ ಜನ್ಮ ಶತಮಾನೋತ್ಸವದ ಸಂದರ್ಭದಲ್ಲಿ ಅವರಿಗೆ ನನ್ನ ನಮನಗಳು. ಅವರು ತಮ್ಮ ಜೀವನವನ್ನು ಸೇವೆ ಮತ್ತು ಆಧ್ಯಾತ್ಮಿಕತೆಗೆ ಮುಡಿಪಾಗಿಟ್ಟಿದ್ದರು” ಎಂದು ಹೇಳಿದ್ದಾರೆ.

ಸ್ವಾಮೀಜಿಯವರು ಸಮಾಜದ ಮೇಲೆ ಅಳಿಸಲಾಗದ ಗುರುತು ಬಿಟ್ಟಿದ್ದು, ಅನೇಕ ಶಿಕ್ಷಣ ಸಂಸ್ಥೆಗಳು ಮತ್ತು ಸಂಶೋಧನಾ ಕೇಂದ್ರಗಳನ್ನು ಸ್ಥಾಪಿಸುವ ಮೂಲಕ ಜನರಲ್ಲಿ ಕಲಿಕೆಯ ಆಸಕ್ತಿ ಮೂಡಿಸಿದ್ದರು ಎಂದು ಪ್ರಧಾನಿ ಮೋದಿ ಸ್ಮರಿಸಿದರು.

ಅವರ ಬೋಧನೆಗಳು ಸರಳತೆ, ದಯೆ ಮತ್ತು ಧರ್ಮನಿಷ್ಠೆಯ ಪ್ರತಿಬಿಂಬವಾಗಿದ್ದು, ಭಾರತೀಯ ಸಂಸ್ಕೃತಿ ಮತ್ತು ಮೌಲ್ಯಗಳನ್ನು ಉಳಿಸಿ ಬೆಳೆಸುವಲ್ಲಿ ಅವರ ಪಾತ್ರ ಅಪಾರವಾಗಿದೆ ಎಂದು ಪ್ರಧಾನಿ ಹೇಳಿದರು.

---------------

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande