
ಬಳ್ಳಾರಿ, 31 ಮಾರ್ಚ್ (ಹಿ.ಸ.)
ಆ್ಯಂಕರ್: ಜಿಲ್ಲಾ ಪೊಲೀಸ್ ಇಲಾಖೆಯ ವತಿಯಿಂದ ಏ.02 ರಂದು ಬೆಳಿಗ್ಗೆ 08 ಗಂಟೆಗೆ ನಗರದ ಜಿಲ್ಲಾ ಸಶಸ್ತç ಪೊಲೀಸ್ ಕವಾಯತು ಮೈದಾನದಲ್ಲಿ 'ಪೊಲೀಸ್ ಧ್ವಜ ದಿನಾಚರಣೆ' ಕಾರ್ಯಕ್ರಮ ಆಯೋಜಿಸಲಾಗಿದೆ.
ಮುಖ್ಯ ಅತಿಥಿಯಾಗಿ ಬಳ್ಳಾರಿ ಗ್ರಾಮೀಣ ಪೊಲೀಸ್ ಠಾಣೆಯ ನಿವೃತ್ತ ಸಹಾಯಕ ಸಬ್-ಇನ್ಸ್ಪೆಕ್ಟರ್ ಆದ ಶ್ರೀನಿವಾಸಲು ಎಂ. ಅವರು ಕಾರ್ಯಕ್ರಮದಲ್ಲಿ ಭಾಗವಹಿಸಿ ಗೌರವ ವಂದನೆ ಸ್ವೀಕರಿಸಲಿದ್ದಾರೆ.
ಬಳ್ಳಾರಿ ವಲಯದ ಪೊಲೀಸ್ ಮಹಾನಿರೀಕ್ಷಕರಾದ ಡಾ.ಪಿ.ಎಸ್. ಹರ್ಷ ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದಾರೆ.
ಜಿಲ್ಲಾ ಪೊಲೀಸ್ ಅಧೀಕ್ಷಕರಾದ ಡಾ.ಸುಮನ್ ಡಿ. ಪೆನ್ನೇಕರ್, ಹೆಚ್ಚುವರಿ ಪೊಲೀಸ್ ಅಧೀಕ್ಷಕರುಗಳಾದ ಕೆ.ಪಿ. ರವಿಕುಮಾರ್ ಮತ್ತು ಎಸ್. ನವೀನ್ಕುಮಾರ್ ಸೇರಿದಂತೆ ಜಿಲ್ಲೆಯ ಎಲ್ಲಾ ಪೊಲೀಸ್ ಅಧಿಕಾರಿ- ಸಿಬ್ಬಂದಿ ವರ್ಗ ಉಪಸ್ಥಿತರಿರಲಿದ್ದಾರೆ.
---------------
ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್