
ವಿಜಯಪುರ, 31 ಮಾರ್ಚ್ (ಹಿ.ಸ.)
ಆ್ಯಂಕರ್ : ವಿಜಯಪುರ ಜಿಲ್ಲೆಯ ಆಲಮೇಲ ತಾಲೂಕಿನ ಕಡಣಿ ಗ್ರಾಮದಲ್ಲಿ ಪರಮಪೂಜ್ಯ ಶ್ರೀ ಭೋಗಲಿಂಗೇಶ್ವರ ಮಹಾಶಿವಯೋಗಿಗಳ ಜಾತ್ರಾ ಮಹೋತ್ಸವದ ಅಂಗವಾಗಿ ಸರಳ ಸಾಮೂಹಿಕ ವಿವಾಹ ಹಾಗೂ ಧರ್ಮಸಭೆ ಕಾರ್ಯಕ್ರಮವು ಭಕ್ತಿಭಾವದಿಂದ ಜರುಗಿತು.
ಈ ಕಾರ್ಯಕ್ರಮದಲ್ಲಿ ಸಿಂದಗಿ ಕ್ಷೇತ್ರದ ಶಾಸಕ ಅಶೋಕ್ ಮನಗೂಳಿ ಭಾಗವಹಿಸಿ ನವದಂಪತಿಗಳಿಗೆ ಆಶೀರ್ವಾದಿಸಿದರು. ಶಾಸಕ ಮನಗೂಳಿ ಅವರ ತಂದೆಯವರಾದ ದಿವಂಗತ ಎಂ.ಸಿ. ಮನಗೂಳಿ ಅವರ ಸ್ಮರಣಾರ್ಥ ಈ ಸಾಮೂಹಿಕ ವಿವಾಹ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು.
ಕಾರ್ಯಕ್ರಮದಲ್ಲಿ ಧರ್ಮಸಭೆ ನಡೆಯಿದ್ದು, ಸಮಾಜದಲ್ಲಿ ಸರಳ ವಿವಾಹಗಳ ಮಹತ್ವ ಮತ್ತು ಸಮಾಜದಲ್ಲಿ ಸೌಹಾರ್ದತೆ, ಮೌಲ್ಯಗಳ ಬೆಳವಣಿಗೆ ಕುರಿತು ವಕ್ತಾರರು ಮಾತನಾಡಿದರು. ನವದಂಪತಿಗಳಿಗೆ ಶುಭಾಶಯ ತಿಳಿಸಿ, ಅವರ ದಾಂಪತ್ಯ ಜೀವನ ಸುಖಮಯವಾಗಿರಲಿ ಎಂದು ಆಶಿಸಿದರು.
ಈ ಸಂದರ್ಭದಲ್ಲಿ ವಿವಿಧ ಮಠಗಳ ಪೂಜ್ಯರು, ಗ್ರಾಮಸ್ಥರು, ಮುಖಂಡರು ಹಾಗೂ ಭಕ್ತಾದಿಗಳು ಹೆಚ್ಚಿನ ಸಂಖ್ಯೆಯಲ್ಲಿ ಉಪಸ್ಥಿತರಿದ್ದರು.
---------------
ಹಿಂದೂಸ್ತಾನ್ ಸಮಾಚಾರ್ / jyothi deshpande