
ವಿಜಯಪುರ, 31 ಮಾರ್ಚ್ (ಹಿ.ಸ.)
ಆ್ಯಂಕರ್ : ಎರಡು ಬೈಕ್ಗಳ ನಡುವೆ ಮುಖಾಮುಖಿ ಡಿಕ್ಕಿಯಾದ ಪರಿಣಾಮ ಇಬ್ಬರು ಬೈಕ್ ಸವಾರರು ಸ್ಥಳದಲ್ಲೇ ಮೃತಪಟ್ಟ ಘಟನೆ ವಿಜಯಪುರ ಜಿಲ್ಲೆಯ ಬಸವನಬಾಗೇವಾಡಿ ತಾಲೂಕಿನ ಮಸಬಿನಾಳ ಗ್ರಾಮದ ಬಳಿ ನಡೆದಿದೆ.
ಮೃತರನ್ನು ಇಂಗಳೇಶ್ವರ ತಾಂಡಾದ ನಿವಾಸಿ ಸಂತೋಷ ಲಾಲು ಚವಾಣ್ (32) ಹಾಗೂ ದೇಗಿನಾಳ ಗ್ರಾಮದ ಭೀಮನಗೌಡ ಪಾಟೀಲ (45) ಎಂದು ಗುರುತಿಸಲಾಗಿದೆ.
ಇನ್ನೂ ಅಪಘಾತದಲ್ಲಿ ಮತ್ತೋರ್ವ ವ್ಯಕ್ತಿ ಗಂಭೀರವಾಗಿ ಗಾಯಗೊಂಡಿದ್ದು, ಗಾಯಾಳುವನ್ನು ಚಿಕಿತ್ಸೆಗಾಗಿ ಬಸವನಬಾಗೇವಾಡಿ ಸರ್ಕಾರಿ ಆಸ್ಪತ್ರೆಗೆ ರವಾನಿಸಲಾಗಿದೆ ಎಂದು ತಿಳಿದು ಬಂದಿದೆ.
ಸುದ್ದಿ ತಿಳಿದ ತಕ್ಷಣ ಸ್ಥಳಕ್ಕೆ ಧಾವಿಸಿದ ಮನಗೂಳಿ ಪೊಲೀಸರು ಸ್ಥಳ ಪರಿಶೀಲನೆ ನಡೆಸಿದ್ದು, ಪ್ರಕರಣವನ್ನು ದಾಖಲಿಸಿಕೊಂಡು ಮುಂದಿನ ತನಿಖೆ ಕೈಗೊಂಡಿದ್ದಾರೆ. ಈ ಘಟನೆ ಮನಗೂಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಸಂಭವಿಸಿದೆ.
---------------
ಹಿಂದೂಸ್ತಾನ್ ಸಮಾಚಾರ್ / jyothi deshpande