
ಬೆಂಗಳೂರು, 31 ಮಾರ್ಚ್ (ಹಿ.ಸ.):
ಆ್ಯಂಕರ್:
ಭಾರತೀಯ ಹವಾಮಾನ ಇಲಾಖೆ ನೀಡಿರುವ ಮುನ್ಸೂಚನೆಯ ಪ್ರಕಾರ, ರಾಜ್ಯದಾದ್ಯಂತ ಮುಂದಿನ ಒಂದು ವಾರದವರೆಗೆ ಒಣ ಹವಾಮಾನ ಹಾಗೂ ಬಿಸಿಲಿನ ತೀವ್ರತೆ ಮುಂದುವರಿಯುವ ಸಾಧ್ಯತೆ ಇದೆ.
ಮಧ್ಯಾಹ್ನದ ನಂತರ ರಾಜ್ಯದ ಹಲವು ಭಾಗಗಳಲ್ಲಿ ಮೋಡ ಕವಿದ ವಾತಾವರಣ ಕಂಡುಬರುವ ಸಾಧ್ಯತೆ ಇದೆ. ಕೆಲವು ಸ್ಥಳಗಳಲ್ಲಿ ಗುಡುಗು-ಸಿಡಿಲು ಸಹಿತ ಜೋರಾದ ಗಾಳಿಯೊಂದಿಗೆ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
---------------
ಹಿಂದೂಸ್ತಾನ್ ಸಮಾಚಾರ್ / Rakesh Mahadevappa