ಒಳ ಮೀಸಲಾತಿ ಗೊಂದಲ: ಬೊಮ್ಮಾಯಿ ನಿವಾಸದಲ್ಲಿ ಬಿಜೆಪಿ ದಲಿತ ನಾಯಕರ ಚರ್ಚೆ
ಬೆಂಗಳೂರು, 04 ಮಾರ್ಚ್ (ಹಿ.ಸ.): ಆ್ಯಂಕರ್: ಎಸ್ಸಿ ಒಳ ಮೀಸಲಾತಿ ಜಾರಿಯಲ್ಲಿ ಉಂಟಾಗಿರುವ ಗೊಂದಲದ ಹಿನ್ನೆಲೆಯಲ್ಲಿ ವಿಧಾನ ಪರಿಷತ್ ಪ್ರತಿಪಕ್ಷದ ನಾಯಕ ಛಲವಾದಿ ನಾರಾಯಣಸ್ವಾಮಿ ನೇತೃತ್ವದಲ್ಲಿ ಬಿಜೆಪಿ ದಲಿತ ಸಮುದಾಯದ ನಾಯಕರು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ‌ ಅವರನ್ನು ಬೆಂಗಳೂರಿ
Meeting


ಬೆಂಗಳೂರು, 04 ಮಾರ್ಚ್ (ಹಿ.ಸ.):

ಆ್ಯಂಕರ್:

ಎಸ್ಸಿ ಒಳ ಮೀಸಲಾತಿ ಜಾರಿಯಲ್ಲಿ ಉಂಟಾಗಿರುವ ಗೊಂದಲದ ಹಿನ್ನೆಲೆಯಲ್ಲಿ ವಿಧಾನ ಪರಿಷತ್ ಪ್ರತಿಪಕ್ಷದ ನಾಯಕ ಛಲವಾದಿ ನಾರಾಯಣಸ್ವಾಮಿ ನೇತೃತ್ವದಲ್ಲಿ ಬಿಜೆಪಿ ದಲಿತ ಸಮುದಾಯದ ನಾಯಕರು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ‌ ಅವರನ್ನು ಬೆಂಗಳೂರಿನ ಆರ್‌.ಟಿ.ನಗರದಲ್ಲಿರುವ ಅವರ ನಿವಾಸದಲ್ಲಿ ಭೇಟಿ ಮಾಡಿ ಮಹತ್ವದ ಚರ್ಚೆ ನಡೆಸಿದರು.

ರಾಜ್ಯದಲ್ಲಿ ಎಸ್ಸಿ ಒಳ ಮೀಸಲಾತಿ ಅನುಷ್ಠಾನಕ್ಕೆ ಸಂಬಂಧಿಸಿದಂತೆ ಸ್ಪಷ್ಟ ಮಾರ್ಗಸೂಚಿಗಳ ಕೊರತೆ ಹಾಗೂ ವಿವಿಧ ಉಪವರ್ಗಗಳಲ್ಲಿ ವ್ಯಕ್ತವಾಗುತ್ತಿರುವ ಅಸಮಾಧಾನದ ಕುರಿತು ಸಭೆಯಲ್ಲಿ ವಿಸ್ತೃತ ಚರ್ಚೆ ನಡೆಯಿತು. ಒಳ ಮೀಸಲಾತಿ ಜಾರಿಗೆ ಸಂಬಂಧಿಸಿದಂತೆ ನ್ಯಾಯಸಮ್ಮತ ಕ್ರಮ ಕೈಗೊಳ್ಳಬೇಕು ಹಾಗೂ ಸಮುದಾಯಗಳ ಹಿತಾಸಕ್ತಿಗೆ ಧಕ್ಕೆಯಾಗದಂತೆ ಸರ್ಕಾರದ ಮೇಲೆ ಒತ್ತಡ ಹೇರಲು ಸಭೆಯಲ್ಲಿ ಚರ್ಚೆ ನಡೆಯಿತು.

ಈ ಸಂದರ್ಭದಲ್ಲಿ ಮಾಜಿ ಸಚಿವರಾದ ಬಿ. ಶ್ರೀರಾಮುಲು, ಶಿವನಗೌಡ ನಾಯಕ್, ಎನ್. ಮಹೇಶ್, ಕೇಂದ್ರದ ಮಾಜಿ ಸಚಿವ ಎ. ನಾರಾಯಣಸ್ವಾಮಿ, ಮಾಜಿ ಸಂಸದ ಮುನಿಸ್ವಾಮಿ, ವೈ. ಸಂಪಂಗಿ ಹಾಗೂ ಆರ್ ಎಸ್ ಎಸ್ ಪ್ರಮುಖರಾದ ವಾದಿರಾಜ ಹಾಜರಿದ್ದರು.

---------------

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande