
ವಿಜಯಪುರ, 04 ಮಾರ್ಚ್ (ಹಿ.ಸ.)
ಆ್ಯಂಕರ್ : ಜಿಲ್ಲೆಯಲ್ಲಿ ವಿದ್ಯಾರ್ಥಿ ನಿಲಯಗಳ ಮೇಲ್ವಿಚಾರಣೆ ಹಾಗೂ ಮಾರ್ಗದರ್ಶನಕ್ಕಾಗಿ ಜಿಲ್ಲಾಡಳಿತದಿಂದ ಮೆಂಟರ್ ಗಳನ್ನು ನೇಮಕ ಮಾಡಲಾಗಿದ್ದು, ಮೆಂಟರ್ ಗಳು ಸಕ್ರಿಯವಾಗಿ ವಸತಿ ನಿಲಯಗಳಿಗೆ ಭೇಟಿ ನೀಡಿ ಮಕ್ಕಳ ಜೊತೆ ಬೆರೆತು ಸಲಹೆ-ಸೂಚನೆ, ಮಾರ್ಗದರ್ಶನ ನೀಡುತ್ತಿರುವುದು ಸಂತಸದ ವಿಷಯ ಎಂದು ವಿಜಯಪುರ ಜಿಲ್ಲಾಧಿಕಾರಿ ಆನಂದ ಕೆ. ಪ್ರಶಂಸೆ ವ್ಯಕ್ತಪಡಿಸಿದರು.
ರಾಷ್ಟ್ರೀಯ ಮಾನಸಿಕ ಆರೋಗ್ಯ ಮತ್ತು ನರವಿಜ್ಞಾನ ಸಂಸ್ಥೆಯಿಂದ
ಜಿಲ್ಲೆಯ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ನಿಲಯ ಪಾಲಕರು ಮತ್ತು ಮೇಲ್ವಿಚಾರಕರಿಗೆ ನಗರದ ರಾಮಕೃಷ್ಞ ಆಶ್ರಮದಲ್ಲಿ ಜೀವನ ಕೌಶಲ್ಯಗಳು, ವಿದ್ಯಾರ್ಥಿಗಳಿಗೆ ಮಾರ್ಗದರ್ಶನ ಹಾಗೂ ಬೆಂಬಲ ಸೇವೆ ತರಬೇತಿ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
ಇಲಾಖೆಯಿಂದ ಆಯೋಜಿಸಿದ ಈ ಮೂರು ದಿನಗಳ ತರಬೇತಿಯು ಮಕ್ಕಳ ಏಳಿಗೆಗೆ ಸಹಕಾರಿಯಾಗಲಿದೆ ಎಂದು ಆಶಿಸಿದ ಅವರು, ನಿಲಯಾರ್ಥಿಗಳಿಗೆ ಸದಾ ಮಾರ್ಗದರ್ಶನ ಹಾಗೂ ಬೆಂಬಲ ಸೇವೆ ಅಗತ್ಯವಾಗಿದೆ ಎಂದರು.
ರಾಮಕೃಷ್ಣ ಆಶ್ರಮದ ನಿರ್ಭಯಾನಂದ ಸ್ವಾಮೀಜಿ ಮಾತನಾಡಿ, ಮಕ್ಕಳು ಹೆಚ್ಚು ಬುದ್ಧಿವಂತರಾಗಿದ್ದು, ಅವರಿಗೆ ಪ್ರೋತ್ಸಾಹ ಮತ್ತು ಮಾರ್ಗದರ್ಶನ ನೀಡುವುದರಿಂದ ಅವರು ಪಾಶ್ಚಿಮಾತ್ಯ ಮಕ್ಕಳೊಂದಿಗೆ ಸ್ಪರ್ಧೆ ಮಾಡಿ ವಿಜೇತರಾಗುವುದರಲ್ಲಿ ಸಂದೇಹವಿಲ್ಲ ಎಂದರು.
ಅಧ್ಯಕ್ಷತೆ ವಹಿಸಿಕೊಂಡಿದ್ದ ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿ ಪುಂಡಲೀಕ ಮಾನವರ ಮಾತನಾಡಿ, ಜಿಲ್ಲೆಯಲ್ಲಿ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ವಸತಿ ನಿಲಯಗಳಲ್ಲಿ ವಿದ್ಯಾರ್ಥಿಗಳಿಗೆ ಸರ್ಕಾರದಿಂದ ನೀಡಲಾಗುತ್ತಿರುವ ಎಲ್ಲಾ ಸೌಕರ್ಯಗಳೊಂದಿಗೆ ಅವರ ಶೈಕ್ಷಣಿಕ ಹಿತದೃಷ್ಟಿಯಿಂದ ಜಿಲ್ಲಾಡಳಿತ ಹಾಗೂ ಜಿಲ್ಲಾ ಪಂಚಾಯತ್ ವತಿಯಿಂದ ಮಿಷನ್ ವಿದ್ಯಾಪುರ ಆನ್ಲೈನ್ ಸ್ಮಾರ್ಟಕ್ಲಾಸ್ ಗಳನ್ನು ನಡೆಸುವ ಮೂಲಕ ಶೈಕ್ಷಣಿಕ ಗುಣಮಟ್ಟವನ್ನು ಹೆಚ್ಚಿಸಲ ಶ್ರಮಿಸಲಾಗುತ್ತಿದೆ ಎಂದರು. ಈಗ ವಿದ್ಯಾರ್ಥಿಗಳ ಮಾನಸಿಕ ಸ್ಥಿತಿ ಇನ್ನೂ ಉತ್ತಮಪಡಿಸಲು ನಿಲಯ ಪಾಲಕರು ಹಾಗೂ ನಿಲಯ ಮೇಲ್ವಿಚಾರಕರಿಗೆ ಈ ತರಬೇತಿ ಹಮ್ಮಿಕೊಳ್ಳಲಾಗಿದ್ದು, ಸದುಪಯೋಗಪಡಿಸಿಕೊಂಡು ವಿದ್ಯಾರ್ಥಿಗಳ ಏಳಿಗೆಗೆ ಶ್ರಮಿಸಬೇಕು ಎಂದರು.
ಮೂರು ದಿನಗಳ ತರಬೇತಿಯಲ್ಲಿ ಬಲೂನ್, ಹಗ್ಗದಿಂದ ಸ್ಟಾರ್ ರಚನೆ, ಅಂದಾಜು ಗೋಲಿಗಳ ಎಣಿಕೆ, ಹಣೆಗೆ ಬಣ್ಣ-ಬಣ್ಣದ ಬಿಂದಿ ಹಚ್ಚುವುದು ಹೀಗೆ ವಿವಿಧ ಚಟುವಟಿಕೆಗಳ ಮೂಲಕ ಜೀವನ ಕೌಶಲ್ಯಗಳನ್ನು ಬಳಸಿಕೊಂಡು ವಿವಿಧ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳುವುದು. ನಿರ್ಧಾರ ತೆಗೆದುಕೊಳ್ಳುವಿಕೆ, ಸೃಜನಶೀಲತೆ,ವಿಮರ್ಶಾತ್ಮಕ ಚಿಂತನೆ, ಸಂವಹನ, ಮಾರ್ಗದರ್ಶನ, ಸಹಾನುಭೂತಿ ಇತ್ಯಾದಿ ಬೆಂಬಲ ಕೌಶಲ್ಯಗಳನ್ನು ಪ್ರಯೋಗಾತ್ಮಕವಾಗಿ ತರಬೇತಿದಾರರಿಗೆ ಮನಮುಟ್ಟುವಂತೆ ವಿವರಿಸುತ್ತಾ ವಿದ್ಯಾರ್ಥಿ ನಿಲಯಗಳಲ್ಲಿ ಅಳವಡಿಸಿಕೊಂಡು ವಿದ್ಯಾರ್ಥಿಗಳ ಸರ್ವತೋಮುಖ ಬೆಳವಣಿಗೆಗೆ ಸಹಕಾರಿಯಾಗಿರುವಂತೆ ಪ್ರೇರೆಪಿಸಿದರು.
ಸಂಪನ್ಮೂಲ ವ್ಯಕ್ತಿಗಳಾಗಿ ರಾಷ್ಟ್ರೀಯ ಮಾನಸಿಕ ಆರೋಗ್ಯ ಮತ್ತು ನರವಿಜ್ಞಾನ ಸಂಸ್ಥೆಯಿಂದ ಡಾ.ನೇಹಾ ಹಾಗೂ ಡಾ.ವಾಣಿ ಪಾಲ್ಗೊಂಡಿದ್ದರು.
ತರಬೇತಿಯ ಕೊನೆಯ ದಿನ ಸಂಪನ್ಮೂಲ ವ್ಯಕ್ತಿಗಳು ತರಬೇತಿದಾರರಿಂದ ಮೌಲ್ಯಮಾಪನ ಮಾಡಿ
---------------
ಹಿಂದೂಸ್ತಾನ್ ಸಮಾಚಾರ್ / jyothi deshpande