
ವಿಜಯಪುರ, 04 ಮಾರ್ಚ್ (ಹಿ.ಸ.)
ಆ್ಯಂಕರ್ : ವಿಜಯಪುರ ಜಿಲ್ಲೆಯ ಸಿಂದಗಿ ತಾಲ್ಲೂಕಿನ ಆಲಮೇಲ್ ಪಟ್ಟಣದಲ್ಲಿ ಆರೋಗ್ಯ ರಕ್ಷಾ ಸಮಿತಿ ಸಭೆ ನಡೆಸಲಾಯಿತು.
ವಿಜಯಪುರ ಜಿಲ್ಲಾ ಪಂಚಾಯತ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಇಲಾಖೆ ವತಿಯಿಂದ ಆಲಮೇಲದ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಈ ಸಭೆಯನ್ನು ಆಯೋಜಿಸಲಾಯಿತು.
ಆರೋಗ್ಯ ರಕ್ಷಾ ಸಮಿತಿ ಸಭೆಯ ನೇತೃತ್ವ ವಹಿಸಿದ್ದ ಸಿಂದಗಿ ತಾಲ್ಲೂಕು ಶಾಸಕ ಅಶೋಕ್ ಮನಗೂಳಿ ಸಿಂದಗಿ, ತಾಲೂಕಿನ ಸರ್ಕಾರಿ ಆಸ್ಪತ್ರೆಗಳು ಹಾಗೂ ಪ್ರಾಥಮಿಕ ಆರೋಗ್ಯ ಕೇಂದ್ರಗಳ ಆಡಳಿತ , ನಿರ್ವಹಣೆ, ಮೂಲ ಸೌಕರ್ಯ, ಸ್ವಚ್ಛತೆ ಹಾಗೂ ಚಿಕಿತ್ಸೆಗಳ ಕುರಿತು ಅಧಿಕಾರಿಗಳೊಂದಿಗೆ ಚರ್ಚೆ ನಡೆಸಿದರು.
---------------
ಹಿಂದೂಸ್ತಾನ್ ಸಮಾಚಾರ್ / jyothi deshpande