ಪಶ್ಚಿಮ ಏಷ್ಯಾ ಬಿಕ್ಕಟ್ಟು: ಭಾರತದಿಂದ ವಿಶೇಷ ನಿಯಂತ್ರಣ ಕೊಠಡಿ ಸ್ಥಾಪನೆ
ನವದೆಹಲಿ, 04 ಮಾರ್ಚ್ (ಹಿ.ಸ.): ಆ್ಯಂಕರ್: ಪಶ್ಚಿಮ ಏಷ್ಯಾದಲ್ಲಿ ತೀವ್ರಗೊಳ್ಳುತ್ತಿರುವ ಬಿಕ್ಕಟ್ಟಿನ ಹಿನ್ನೆಲೆಯಲ್ಲಿ, ವಿದೇಶಾಂಗ ವ್ಯವಹಾರಗಳ ಸಚಿವಾಲಯ ಅಲ್ಲಿ ವಾಸಿಸುತ್ತಿರುವ ಭಾರತೀಯ ನಾಗರಿಕರ ಸಹಾಯಕ್ಕಾಗಿ ವಿಶೇಷ ನಿಯಂತ್ರಣ ಕೊಠಡಿಯನ್ನು ಸ್ಥಾಪಿಸಿದೆ. ಈ ಕುರಿತು ಮಾಹಿತಿ ನೀಡಿದ ವಿದೇಶಾಂಗ ಸಚ
MEA


ನವದೆಹಲಿ, 04 ಮಾರ್ಚ್ (ಹಿ.ಸ.):

ಆ್ಯಂಕರ್:

ಪಶ್ಚಿಮ ಏಷ್ಯಾದಲ್ಲಿ ತೀವ್ರಗೊಳ್ಳುತ್ತಿರುವ ಬಿಕ್ಕಟ್ಟಿನ ಹಿನ್ನೆಲೆಯಲ್ಲಿ, ವಿದೇಶಾಂಗ ವ್ಯವಹಾರಗಳ ಸಚಿವಾಲಯ ಅಲ್ಲಿ ವಾಸಿಸುತ್ತಿರುವ ಭಾರತೀಯ ನಾಗರಿಕರ ಸಹಾಯಕ್ಕಾಗಿ ವಿಶೇಷ ನಿಯಂತ್ರಣ ಕೊಠಡಿಯನ್ನು ಸ್ಥಾಪಿಸಿದೆ.

ಈ ಕುರಿತು ಮಾಹಿತಿ ನೀಡಿದ ವಿದೇಶಾಂಗ ಸಚಿವಾಲಯದ ಅಧಿಕೃತ ವಕ್ತಾರ ರಣಧೀರ್ ಜೈಸ್ವಾಲ್, ಪಶ್ಚಿಮ ಏಷ್ಯಾ ಮತ್ತು ಗಲ್ಫ್ ಪ್ರದೇಶದ ಪ್ರಸ್ತುತ ಪರಿಸ್ಥಿತಿಯನ್ನು ಗಮನದಲ್ಲಿಟ್ಟುಕೊಂಡು ತುರ್ತು ಪ್ರತಿಕ್ರಿಯೆಯಾಗಿ ಈ ಕ್ರಮ ಕೈಗೊಳ್ಳಲಾಗಿದೆ ಎಂದು ಹೇಳಿದರು.

ಪಶ್ಚಿಮ ಏಷ್ಯಾದಲ್ಲಿ ಸುಮಾರು 10 ಮಿಲಿಯನ್ (ಒಂದು ಕೋಟಿ) ಭಾರತೀಯರು ವಾಸಿಸುತ್ತಿದ್ದಾರೆ. ಅವರ ಸುರಕ್ಷತೆ ಮತ್ತು ಯೋಗಕ್ಷೇಮವು ಸರ್ಕಾರಕ್ಕೆ ಪ್ರಮುಖ ಆದ್ಯತೆಯಾಗಿದೆ ಎಂದು ಸಚಿವಾಲಯ ಸ್ಪಷ್ಟಪಡಿಸಿದೆ.

ಸಹಾಯವಾಣಿ ಸಂಖ್ಯೆಗಳು ಪ್ರಕಟ

ಜನರು ಬೆಳಿಗ್ಗೆ 9ರಿಂದ ರಾತ್ರಿ 9ರವರೆಗೆ ನಿಯಂತ್ರಣ ಕೊಠಡಿಯನ್ನು ಸಂಪರ್ಕಿಸಬಹುದು. ಸರ್ಕಾರ ಕೆಳಗಿನ ಸಹಾಯವಾಣಿ ಸಂಖ್ಯೆಗಳನ್ನು ಪ್ರಕಟಿಸಿದೆ:

1800 118 797 (ಉಚಿತ ಸಂಖ್ಯೆ)

+91 11 2301 2113

+91 11 2301 4104

+91 11 2301 7905

ವಿದೇಶಾಂಗ ಸಚಿವಾಲಯವು ಪರಿಸ್ಥಿತಿಯನ್ನು ನಿಕಟವಾಗಿ ಗಮನಿಸುತ್ತಿದ್ದು, ಅಗತ್ಯವಿದ್ದಲ್ಲಿ ಇನ್ನಷ್ಟು ಕ್ರಮಗಳನ್ನು ಕೈಗೊಳ್ಳಲಾಗುವುದು ಎಂದು ತಿಳಿಸಿದೆ.

---------------

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande