
ವಿಜಯಪುರ, 04 ಮಾರ್ಚ್ (ಹಿ.ಸ.)
ಆ್ಯಂಕರ್ : ಸಾರ್ವಜನಿಕರ ಸುರಕ್ಷತೆಯೇ ನಮ್ಮ ಸರ್ಕಾರದ ಮೂಲ ಉದ್ದೇಶ. ಪ್ರತಿಯೊಬ್ಬರೂ ಸುರಕ್ಷತಾ ನಿಯಮಗಳನ್ನು ಶಿಸ್ತಿನಿಂದ ಪಾಲಿಸುವ ಮೂಲಕ ಅಪಘಾತ ಮುಕ್ತ ಸುಭದ್ರ ಸುರಕ್ಷಿತ ಭಾರತ ನಿರ್ಮಿಸೊಣ ಎಂದು ಸಕ್ಕರೆ ಸಚಿವ ಶಿವಾನಂದ ಪಾಟೀಲ್ ಕರೆ ನೀಡಿದರು.
ವಿಜಯಪುರ ನಗರದಲ್ಲಿ ರಾಷ್ಟ್ರೀಯ ಸುರಕ್ಷತಾ ದಿನವನ್ನು ಆಚರಿಸುವ ಮೂಲಕ ಸಾರ್ವಜನಿಕರಿಗೆ ಕಾರ್ಮಿಕರಿಗೆ ರಾಷ್ಟ್ರೀಯ ಸುರಕ್ಷತೆ ಬಗ್ಗೆ ಜಾಗ್ರತೆ ಮೂಡಿಸಿ ರಾಷ್ಟ್ರೀಯ ಸುರಕ್ಷತಾ ದಿನದ ಶುಭಾಶಯ ಕೊರಿದರು.
ಕೆಲಸದ ಸ್ಥಳಗಳಲ್ಲಿ ಸಂಭವಿಸಬಹುದಾದ ಅಪಘಾತಗಳನ್ನು ತಡೆಗಟ್ಟುವುದು ಮತ್ತು ಸುರಕ್ಷತಾ ಕ್ರಮಗಳ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸುವುದು ಈ ದಿನದ ಮುಖ್ಯ ಉದ್ದೇಶವಾಗಿದೆ ಎಂದರು.
ಅಭಿವೃದ್ಧಿಯ ಪಥದಲ್ಲಿ ಕಾರ್ಮಿಕರ ಮತ್ತು ಸಾರ್ವಜನಿಕರ ಸುರಕ್ಷತೆಯೇ ನಮ್ಮ ಮೊದಲ ಆದ್ಯತೆ. ಪ್ರತಿಯೊಬ್ಬರೂ ಸುರಕ್ಷತಾ ನಿಯಮಗಳನ್ನು ಶಿಸ್ತಿನಿಂದ ಪಾಲಿಸುವ ಮೂಲಕ ಅಪಘಾತ ಮುಕ್ತ, ಸುಭದ್ರ ಹಾಗೂ ಸುರಕ್ಷಿತ ಭಾರತವನ್ನು ನಿರ್ಮಿಸೋಣ ಎಂದು ಅವರು ಕರೆ ನೀಡಿದರು.
---------------
ಹಿಂದೂಸ್ತಾನ್ ಸಮಾಚಾರ್ / jyothi deshpande