ವಿಕಲಚೇತನರಿಗೆ ಸಂಬಂಧಪಟ್ಟ ಸಂಸ್ಥೆಗಳಿಂದ ನೋಂದಣಿಗೆ ಸೂಚನೆ
ರಾಯಚೂರು, 04 ಮಾರ್ಚ್ (ಹಿ.ಸ.): ಆ್ಯಂಕರ್:ವಿಕಲಚೇತನರಿಗೆ ಸಂಬಂಧಪಟ್ಟ ಚಟುವಟಿಕೆಗಳ ಕೇಂದ್ರಗಳಾದ ವಿಶೇಷ ಶಾಲೆಗಳು, ಫಿಜಿಯೋ ಥೆರಪಿ ಕೇಂದ್ರಗಳು, ತರಬೇತಿ ಕೇಂದ್ರಗಳು, ವಸತಿ ನಿಲಯಗಳು ಸೇರಿದಂತೆ ಇನ್ನಿತರ ಕೇಂದ್ರಗಳನ್ನು ನಡೆಸುತ್ತಿರುವ ಸಂಸ್ಥೆಗಳು ವಿಕಲಚೇತನರ ಹಕ್ಕುಗಳ ಅಧಿನಿಯಮ ಕಾಯ್ದೆ 2016ರಡಿ ಕಡ
ವಿಕಲಚೇತನರಿಗೆ ಸಂಬಂಧಪಟ್ಟ ಸಂಸ್ಥೆಗಳಿಂದ ನೋಂದಣಿಗೆ ಸೂಚನೆ


ರಾಯಚೂರು, 04 ಮಾರ್ಚ್ (ಹಿ.ಸ.):

ಆ್ಯಂಕರ್:ವಿಕಲಚೇತನರಿಗೆ ಸಂಬಂಧಪಟ್ಟ ಚಟುವಟಿಕೆಗಳ ಕೇಂದ್ರಗಳಾದ ವಿಶೇಷ ಶಾಲೆಗಳು, ಫಿಜಿಯೋ ಥೆರಪಿ ಕೇಂದ್ರಗಳು, ತರಬೇತಿ ಕೇಂದ್ರಗಳು, ವಸತಿ ನಿಲಯಗಳು ಸೇರಿದಂತೆ ಇನ್ನಿತರ ಕೇಂದ್ರಗಳನ್ನು ನಡೆಸುತ್ತಿರುವ ಸಂಸ್ಥೆಗಳು ವಿಕಲಚೇತನರ ಹಕ್ಕುಗಳ ಅಧಿನಿಯಮ ಕಾಯ್ದೆ 2016ರಡಿ ಕಡ್ಡಾಯವಾಗಿ ಸೇವಾ ಸಿಂಧು ಆನ್‌ಲೈನ್ ತಂತ್ರಾಂಶದಲ್ಲಿ ನೋಂದಣಿ ಮಾಡಿಕೊಳ್ಳಬೇಕೆಂದು ಕೋರಲಾಗಿದೆ.

ಹಿರಿಯ ನಾಗರಿಕರಿಗೆ ಸಂಬಂಧಪಟ್ಟ ಚಟುವಟಿಕೆಗಳ ಕೇಂದ್ರಗಳನ್ನು ನಡೆಸುತ್ತಿರುವ ಸಂಸ್ಥೆಗಳು ಹಿರಿಯ ನಾಗರಿಕರ ಸಂರಕ್ಷಣಾ ಕಾಯ್ದೆ 2007ರಡಿ ಕಡ್ಡಾಯವಾಗಿ ಸೇವಾ ಸಿಂಧು ಆನ್‌ಲೈನ್ ತಂತ್ರಾಂಶದಲ್ಲಿ ನೋಂದಣಿ ಮಾಡಿಕೊಳ್ಳತಕ್ಕದ್ದು. ಈ ಕಾಯ್ದೆಗಳನ್ವಯ ನೋಂದಣಿ ಮಾಡಿಸಿಕೊಳ್ಳದೇ ಇದ್ದಲ್ಲಿ ಅಂತಹ ಸಂಸ್ಥೆಗಳ ಮೇಲೆ ನಿಯಮಾನುಸಾರ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

ಹೆಚ್ಚಿನ ಮಾಹಿತಿಗಾಗಿ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ, 1-3-1411/4, ಆಶಾಪೂರ್ ರಸ್ತೆ, ಆಫೀರ‍್ಸ್ ಕಾಲೋನಿ ಎದುರುಗಡೆ ಶ್ರೀರಾಜಮಾತಾ ಗುಡಿ ಹತ್ತಿರ, ರಾಯಚೂರಿಗೆ ಭೇಟಿ ನೀಡಬಹುದಾಗಿದೆ. ಅಥವಾ ದೂರವಾಣಿ ಸಂಖ್ಯೆ:-08532 200992ಗೆ ಸಂಪರ್ಕ ಮಾಡಬಹುದಾಗಿದೆ ಎಂದು ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

---------------

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande