
ನವದೆಹಲಿ, 04 ಮಾರ್ಚ್ (ಹಿ.ಸ.):
ಆ್ಯಂಕರ್:ದೇಶದ ನಾಗರಿಕರಿಗೆ ಹೋಳಿ ಹಬ್ಬದ ಶುಭಾಶಯಗಳನ್ನು ಪ್ರಧಾನಿ ನರೇಂದ್ರ ಮೋದಿ ತಿಳಿಸಿದ್ದಾರೆ. ಬಣ್ಣಗಳ ಹಬ್ಬವಾದ ಹೋಳಿ ಎಲ್ಲರ ಜೀವನದಲ್ಲೂ ಸಂತೋಷ, ಸಮೃದ್ಧಿ ಮತ್ತು ಯಶಸ್ಸಿನ ಹೊಸ ಬೆಳಕನ್ನು ತರಲಿ ಎಂದು ಅವರು ಆಶಿಸಿದ್ದಾರೆ.
ಸಾಮಾಜಿಕ ಜಾಲತಾಣ ಎಕ್ಸ್ ಮೂಲಕ ಸಂದೇಶ ಹಂಚಿಕೊಂಡ ಪ್ರಧಾನಿಯವರು, ಹೋಳಿ ಹಬ್ಬವು ಸಮಾಜದಲ್ಲಿ ಐಕ್ಯತೆ, ಸೌಹಾರ್ದತೆ ಮತ್ತು ಸಹೋದರತ್ವದ ಭಾವನೆಯನ್ನು ಬಲಪಡಿಸುವ ಹಬ್ಬವಾಗಿದೆ ಎಂದು ಹೇಳಿದ್ದಾರೆ. ಬಣ್ಣಗಳು ಮತ್ತು ಉತ್ಸಾಹದ ಈ ಹಬ್ಬವು ದೇಶದ ಪ್ರತಿಯೊಬ್ಬರ ಬದುಕಿನಲ್ಲಿ ಹೊಸ ಆಶಾಭಾವನೆ ಮೂಡಿಸಲಿ ಎಂದು ಅವರು ಹೇಳಿದ್ದಾರೆ.
ಪ್ರತಿಯೊಬ್ಬರ ಜೀವನವು ಸಂತೋಷ, ಸಮೃದ್ಧಿ ಮತ್ತು ಯಶಸ್ಸಿನ ಬಣ್ಣಗಳಿಂದ ತುಂಬಿರಲಿ ಎಂದು ಪ್ರಧಾನಿ ತಮ್ಮ ಶುಭಾಶಯ ಸಂದೇಶದಲ್ಲಿ ತಿಳಿಸಿದ್ದಾರೆ.
---------------
ಹಿಂದೂಸ್ತಾನ್ ಸಮಾಚಾರ್ / Rakesh Mahadevappa