ಮಾಜಿ ಸಚಿವ ದಿವಂಗತ ಟಿ. ಚನ್ನಯ್ಯ ಪುತ್ಥಳಿ ಅನಾವರಣ
ಮಾಜಿ ಸಚಿವ ದಿವಂಗತ ಟಿ. ಚನ್ನಯ್ಯ ಪುತ್ಥಳಿ ಅನಾವರಣ
ಕೋಲಾರ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಆವರಣದಲ್ಲಿ ಮಾಜಿ ಸಚಿವ ದಿವಂಗತ ಟಿ. ಚನ್ನಯ್ಯನವರ ಪುತ್ಥಳಿಯನ್ನು ಸಚಿವ ಭೈರತಿ ಸುರೇಶ್ ಅನಾವರಣ ಮಾಡಿದರು.


ಕೋಲಾರ, ೦೪ ಮಾರ್ಚ್ (ಹಿ.ಸ)

ಆಂಕರ್ : ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಕೋಲಾರ ಇವರ ಸಂಯುಕ್ತಾಶ್ರಯದಲ್ಲಿ ಶ್ರೀ ಚನ್ನಯ್ಯ ರಂಗಮಂದಿರದಲ್ಲಿ ಶ್ರೀ ಚನ್ನಯ್ಯ ಅವರ ಪುತ್ಥಳಿ ಅನಾವರಣವನ್ನು ಜಿಲ್ಲಾ ಉಸ್ತುವಾರಿ ಸಚಿವರಾದ ಬಿ.ಎಸ್ ಸುರೇಶ್ ನೆರವೇರಿಸಿದರು.

ಸಚಿವರೊಂದಿಗೆ ಕೋಲಾರ ಶಾಸಕ ಡಾ. ಕೊತ್ತೂರು ಜಿ. ಮಂಜುನಾಥ್, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ನಜೀರ್ ಅಹಮದ್, ಬಂಗಾರಪೇಟೆ ವಿಧಾನಸಭಾ ಕ್ಷೇತ್ರ ಶಾಸಕರು ಹಾಗೂ ಕರ್ನಾಟಕ ನಗರ ಮೂಲ ಸೌಕರ್ಯ ಅಭಿವೃದ್ಧಿ ಮತ್ತು ಹಣಕಾಸು ನಿಗಮದ ಅಧ್ಯಕ್ಷ ಎಸ್.ಎನ್. ನಾರಾಯಣಸ್ವಾಮಿ ಕೆ.ಎಂ, ಮಾಲೂರು ಶಾಸಕ ಕೆ.ವೈ. ನಂಜೇಗೌಡ, ವಿಧಾನ ಪರಿಷತ್ ಸದಸ್ಯ ಎಂ.ಎಲ್ ಅನಿಲ್ ಕುಮಾರ್, ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷ ಶಿವಕುಮಾರ್, ಜಿಲ್ಲಾಧಿಕಾರಿ ಡಾ. ಎಂ.ಆರ್. ರವಿ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ. ಪ್ರವೀಣ್ ಪಿ ಬಾಗೇವಾಡಿ, ಅಪರ ಜಿಲ್ಲಾಧಿಕಾರಿ ಮಂಗಳಾ, ಉಪವಿಭಾಗಾಧಿಕಾರಿ ಜಂಬಗಿ ರೇಣುಕಾಪ್ರಸಾದ್ ದಿಲೀಪ್ ಸೇರಿದಂತೆ ಇಲಾಖೆಯ ಹಿರಿಯ ಅಧಿಕಾರಿಗಳು ಇದ್ದರು.

ಹಿಂದೂಸ್ತಾನ್ ಸಮಾಚಾರ್ / ಎಸ್.ಚಂದ್ರಶೇಖರ್


 rajesh pande