ಟಾಕ್ಸಿಕ್ ಚಲನಚಿತ್ರ ಬಿಡುಗಡೆ ದಿನಾಂಕ ಮುಂದೂಡಿಕೆ
ಬೆಂಗಳೂರು, 04 ಮಾರ್ಚ್ (ಹಿ.ಸ.): ಆ್ಯಂಕರ್: ರಾಕಿಂಗ್ ಸ್ಟಾರ್ ಯಶ್ ಅಭಿನಯದ ಬಹುನಿರೀಕ್ಷಿತ ‘ಟಾಕ್ಸಿಕ್’ ಸಿನಿಮಾ ಮಾರ್ಚ್ 19ರಂದು ತೆರೆಗೆ ಬರಬೇಕಾಗಿತ್ತು. ಆದರೆ ಕೊನೆಯ ಕ್ಷಣದಲ್ಲಿ ಚಿತ್ರತಂಡ ಬಿಡುಗಡೆ ದಿನಾಂಕವನ್ನು ಜೂನ್ 4ಕ್ಕೆ ಮುಂದೂಡಲಾಗಿದೆ ಎಂದು ಅಧಿಕೃತವಾಗಿ ಘೋಷಿಸಿದೆ. ಚಿತ್ರದ ಟ್ರೈಲರ
postponed


ಬೆಂಗಳೂರು, 04 ಮಾರ್ಚ್ (ಹಿ.ಸ.):

ಆ್ಯಂಕರ್:

ರಾಕಿಂಗ್ ಸ್ಟಾರ್ ಯಶ್ ಅಭಿನಯದ ಬಹುನಿರೀಕ್ಷಿತ ‘ಟಾಕ್ಸಿಕ್’ ಸಿನಿಮಾ ಮಾರ್ಚ್ 19ರಂದು ತೆರೆಗೆ ಬರಬೇಕಾಗಿತ್ತು. ಆದರೆ ಕೊನೆಯ ಕ್ಷಣದಲ್ಲಿ ಚಿತ್ರತಂಡ ಬಿಡುಗಡೆ ದಿನಾಂಕವನ್ನು ಜೂನ್ 4ಕ್ಕೆ ಮುಂದೂಡಲಾಗಿದೆ ಎಂದು ಅಧಿಕೃತವಾಗಿ ಘೋಷಿಸಿದೆ.

ಚಿತ್ರದ ಟ್ರೈಲರ್ ಮಾರ್ಚ್ 8ರಂದು ಬಿಡುಗಡೆಯಾಗಬೇಕಿತ್ತು. ಅದಕ್ಕಾಗಿ ಸಕಲ ಸಿದ್ಧತೆಗಳನ್ನು ಕೂಡ ತಂಡ ಮಾಡಿಕೊಂಡಿತ್ತು. ಆದರೆ ಮಧ್ಯಪ್ರಾಚ್ಯ ರಾಷ್ಟ್ರಗಳಲ್ಲಿ ಉಂಟಾಗಿರುವ ಯುದ್ಧಭೀತಿ ಹಾಗೂ ಗಲ್ಫ್ ಪ್ರದೇಶದಲ್ಲಿ ಉದ್ಭವಿಸಿರುವ ಬಿಕ್ಕಟ್ಟಿನ ಹಿನ್ನೆಲೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ ಎಂದು ನಿರ್ಮಾಣ ಸಂಸ್ಥೆ ತಿಳಿಸಿದೆ.

‘ಟಾಕ್ಸಿಕ್’ ಚಿತ್ರವನ್ನು ಜಾಗತಿಕ ಪ್ರೇಕ್ಷಕರನ್ನು ಗಮನದಲ್ಲಿಟ್ಟುಕೊಂಡು ನಿರ್ಮಿಸಲಾಗಿದೆ. ಕನ್ನಡ ಮತ್ತು ಇಂಗ್ಲಿಷ್‌ನಲ್ಲಿ ಚಿತ್ರೀಕರಿಸಲ್ಪಟ್ಟಿರುವ ಈ ಸಿನಿಮಾ, ಭಾರತ ಮಾತ್ರವಲ್ಲದೆ ವಿಶ್ವದಾದ್ಯಂತ ವೀಕ್ಷಕರನ್ನು ತಲುಪುವ ಉದ್ದೇಶ ಹೊಂದಿದೆ. ವರ್ಷಗಳ ಪರಿಶ್ರಮದ ಬಳಿಕ ಮಾರ್ಚ್ 19ರಂದು ಚಿತ್ರವನ್ನು ಬಿಡುಗಡೆ ಮಾಡಲು ಉತ್ಸುಕರಾಗಿದ್ದೆವು. ಆದರೆ ಪ್ರಸ್ತುತ ಪರಿಸ್ಥಿತಿಯಲ್ಲಿ ಬಿಡುಗಡೆ ಮುಂದೂಡುವುದು ಅನಿವಾರ್ಯವಾಗಿದೆ ಎಂದು ಕೆವಿಎನ್ ಪ್ರೊಡಕ್ಷನ್ಸ್ ತನ್ನ ಪ್ರಕಟಣೆಯಲ್ಲಿ ತಿಳಿಸಿದೆ.

‘ಟಾಕ್ಸಿಕ್’ ಚಿತ್ರಕ್ಕೆ ಯಶ್ ಸ್ವತಃ ನಿರ್ಮಾಪಕರಾಗಿದ್ದು, ಗೀತು ಮೋಹನ್ ದಾಸ್ ನಿರ್ದೇಶನ ಮಾಡಿದ್ದಾರೆ. ನಟಿಯರಾದ ಕಿಯಾರಾ ಅಡ್ವಾಣಿ ಮತ್ತು ರುಕ್ಮಿಣಿ ವಸಂತ್ ಪ್ರಮುಖ ಪಾತ್ರಗಳಲ್ಲಿ ಅಭಿನಯಿಸಿದ್ದಾರೆ.

ಈಗ ಹೊಸ ಬಿಡುಗಡೆ ದಿನಾಂಕವಾಗಿ ಜೂನ್ 4 ನಿಗದಿಯಾಗಿದ್ದು, ಕನ್ನಡ, ಇಂಗ್ಲಿಷ್ ಸೇರಿದಂತೆ ವಿವಿಧ ಭಾರತೀಯ ಭಾಷೆಗಳಲ್ಲಿ ಸಿನಿಮಾ ಬಿಡುಗಡೆಯಾಗಲಿದೆ. ಬಿಡುಗಡೆ ಮುಂದೂಡಿಕೆಯಿಂದ ಅಭಿಮಾನಿಗಳಲ್ಲಿ ನಿರಾಸೆ ಮೂಡಿದ್ದರೂ, ಭರ್ಜರಿ ಜಾಗತಿಕ ಬಿಡುಗಡೆಯ ನಿರೀಕ್ಷೆ ಹೆಚ್ಚಾಗಿದೆ.

---------------

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande