ಒಳಮೀಸಲಾತಿ ಅಡಿ ಖಾಲಿ ಹುದ್ದೆ ಭರ್ತಿಗೆ ಶ್ರೀರಾಮುಲು ಒತ್ತಾಯ
ಬೆಂಗಳೂರು, 04 ಮಾರ್ಚ್ (ಹಿ.ಸ.): ಆ್ಯಂಕರ್: ಒಳಮೀಸಲಾತಿ ಅಡಿಯಲ್ಲಿ ರಾಜ್ಯ ಸರ್ಕಾರವು ವಿವಿಧ ಇಲಾಖೆಗಳಲ್ಲಿ ಖಾಲಿ ಇರುವ ಹುದ್ದೆಗಳನ್ನು ತಕ್ಷಣ ಭರ್ತಿ ಮಾಡಬೇಕೆಂದು ಮಾಜಿ ಸಚಿವ ಬಿ. ಶ್ರೀರಾಮುಲು ಆಗ್ರಹಿಸಿದರು. ಬೆಂಗಳೂರಿನ ಮಲ್ಲೇಶ್ವರಂನ ಜಗನ್ನಾಥ ಭವನದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ
Ramulu


ಬೆಂಗಳೂರು, 04 ಮಾರ್ಚ್ (ಹಿ.ಸ.):

ಆ್ಯಂಕರ್:

ಒಳಮೀಸಲಾತಿ ಅಡಿಯಲ್ಲಿ ರಾಜ್ಯ ಸರ್ಕಾರವು ವಿವಿಧ ಇಲಾಖೆಗಳಲ್ಲಿ ಖಾಲಿ ಇರುವ ಹುದ್ದೆಗಳನ್ನು ತಕ್ಷಣ ಭರ್ತಿ ಮಾಡಬೇಕೆಂದು ಮಾಜಿ ಸಚಿವ ಬಿ. ಶ್ರೀರಾಮುಲು ಆಗ್ರಹಿಸಿದರು.

ಬೆಂಗಳೂರಿನ ಮಲ್ಲೇಶ್ವರಂನ ಜಗನ್ನಾಥ ಭವನದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು,

ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಒಂದೇ ವರ್ಷದಲ್ಲಿ ಒಳಮೀಸಲಾತಿಯನ್ನು ಜಾರಿಗೊಳಿಸಿ ಸರ್ಕಾರಿ ಹುದ್ದೆಗಳನ್ನು ಭರ್ತಿ ಮಾಡಲಾಗುವುದು ಎಂದು ಜನತೆಗೆ ನೀಡಿದ ಭರವಸೆ ಇನ್ನೂ ಈಡೇರಿಲ್ಲ. ಆ ಭರವಸೆ ಈಗಲೂ ಕನಸಾಗಿಯೇ ಉಳಿದಿದೆ ಎಂದು ಅವರು ಟೀಕಿಸಿದರು.

ಗುರುವಾರ ನಡೆಯಲಿರುವ ಸಚಿವ ಸಂಪುಟ ಸಭೆಯಲ್ಲಿ ಒಳಮೀಸಲಾತಿ ಅನುಷ್ಟಾನದ ಕುರಿತು ಸ್ಪಷ್ಟ ನಿರ್ಧಾರ ಕೈಗೊಳ್ಳದಿದ್ದರೆ, ಪಕ್ಷವು ಮುಂದಿನ ದಿನಗಳಲ್ಲಿ ಹೋರಾಟ ನಡೆಸಲು ರೂಪುರೇಷೆಗಳನ್ನು ಸಿದ್ಧಪಡಿಸುತ್ತಿದೆ ಎಂದು ಎಚ್ಚರಿಸಿದರು.

ಈ ಸಂದರ್ಭದಲ್ಲಿ ವಿಧಾನ ಪರಿಷತ್ ಸದಸ್ಯೆ ಹೇಮಾಲತಾ ನಾಯಕ್, ಬಿಜೆಪಿ ಎಸ್.ಟಿ. ಮೋರ್ಚಾ ರಾಜ್ಯಾಧ್ಯಕ್ಷ ಬಂಗಾರು ಹನುಮಂತು ಸೇರಿದಂತೆ ಹಲವು ಮುಖಂಡರು ಉಪಸ್ಥಿತರಿದ್ದರು.

---------------

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande