
ಧಾರವಾಡ, 05 ಮಾರ್ಚ್ (ಹಿ.ಸ.):
ಆ್ಯಂಕರ್:ಸಂವಿಧಾನ ಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್ ಅವರ ಸಾಧನೆಗಳು ಪ್ರತಿದಿನವೂ ಸಮಾಜಕ್ಕೆ ಮಾರ್ಗದರ್ಶನ ನೀಡುತ್ತಿವೆ ಎಂದು ಧಾರವಾಡ ಜಿಲ್ಲಾಧಿಕಾರಿ ಸ್ನೇಹಲ್ ಆರ್. ಹೇಳಿದರು.
ಧಾರವಾಡದ ಜ್ಞಾನ ಬುದ್ಧವಿಹಾರದಲ್ಲಿ ಆಯೋಜಿಸಿದ್ದ ಭೀಮ ಗಾಯನ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿ, ಅಂಬೇಡ್ಕರ್ ಅವರ ಸಂವಿಧಾನ, ಕಾರ್ಮಿಕ ಹಾಗೂ ಸಾಮಾಜಿಕ ಚಿಂತನೆಗಳು ಸಮಾಜವನ್ನು ಸಮಾನತೆ ಮತ್ತು ನ್ಯಾಯದ ದಾರಿಯಲ್ಲಿ ನಡೆಸಿವೆ ಎಂದರು. ವಿದ್ಯಾರ್ಥಿಗಳು ಅವರ ಆದರ್ಶಗಳನ್ನು ಅಳವಡಿಸಿಕೊಂಡು ಉತ್ತಮ ನಾಗರಿಕರಾಗಬೇಕು ಎಂದು ಕರೆ ನೀಡಿದರು.
ಟ್ರಸ್ಟಿ ಸಂತೋಷ ಜಕ್ಕಪ್ಪನವರ ಹಾಗೂ ಇತರರು ಅಂಬೇಡ್ಕರ್ ಅವರ ತ್ಯಾಗ ಮತ್ತು ಶಿಕ್ಷಣ ಕ್ಷೇತ್ರದ ಕೊಡುಗೆಗಳನ್ನು ಸ್ಮರಿಸಿದರು. ಕಾರ್ಯಕ್ರಮದಲ್ಲಿ ಗಣ್ಯರು ಪುಷ್ಪಾರ್ಚನೆ ಸಲ್ಲಿಸಿದರು; ಗಾಯನ ಕಾರ್ಯಕ್ರಮವೂ ನಡೆಯಿತು.
---------------
ಹಿಂದೂಸ್ತಾನ್ ಸಮಾಚಾರ್ / Rakesh Mahadevappa