
ಧಾರವಾಡ, 05 ಮಾರ್ಚ್ (ಹಿ.ಸ.):
ಆ್ಯಂಕರ್:
2025-26 ನೇ ಸಾಲಿನ ಸಮಗ್ರ ತೋಟಗಾರಿಕೆ ಅಭಿವೃದ್ಧಿ ಯೋಜನೆಯಡಿ ತರಕಾರಿ ಬೀಜಗಳ ಮಿನಿಕಿಟ್‍ನ್ನು ಧಾರವಾಡ ಹಾಗೂ ಕಲಘಟಗಿ ತಾಲೂಕಿನ ಸಾಮಾನ್ಯ, ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ರೈತರಿಗೆ ವಿತರಿಸಲಾಗುವುದು. ಸದರಿ ತರಕಾರಿ ಮಿನಿಕಿಟ್ ಪಡೆಯಲು ರೈತರು ಆಧಾರ ಕಾರ್ಡ ಝರಾಕ್ಸ್ ಪ್ರತಿ, ಬ್ಯಾಂಕ್ ಪಾಸ್‍ಬುಕ್ ಝರಾಕ್ಸ್ ಪ್ರತಿ, ಉತಾರ ಹಾಗೂ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ರೈತರಾಗಿದ್ದಲ್ಲಿ ಜಾತಿ ಪ್ರಮಾಣ ಪತ್ರ ಅರ್ಜಿಯೊಂದಿಗೆ ಕಛೇರಿಗೆ ಸಲ್ಲಿಸಬೇಕು.
ಮೊದಲು ಬಂದ ರೈತರಿಗೆ ಆದ್ಯತೆ ಮೇರೆಗೆ ವಿತರಿಸಲಾಗುವುದು. ರೈತರು ಸದರಿ ಯೋಜನೆಯ ಪ್ರಯೋಜನ ಪಡೆದುಕೊಳ್ಳಬೇಕೆಂದು ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
---------------
ಹಿಂದೂಸ್ತಾನ್ ಸಮಾಚಾರ್ / Rakesh Mahadevappa