ಕೋಲಾರ ಚಿಕ್ಕಬಳ್ಳಾಪುರ ಜಿಲ್ಲೆಗಳಿಗೆ ಕೊಳಚೆ ನೀರು ಪೂರೈಕೆ ; ದೇವೇಗೌಡ ಆಕ್ರೋಶ
ಕೋಲಾರ ಚಿಕ್ಕಬಳ್ಳಾಪುರ ಜಿಲ್ಲೆಗಳಿಗೆ ಕೊಳಚೆ ನೀರು ಪೂರೈಕೆ ; ದೇವೇಗೌಡ ಆಕ್ರೋಶ
ಮಾಲೂರಿನ ಹೂಡಿ ವಿಜಯ್ಕುಮಾರ್ ಮತ್ತು ಬೆಂಬಲಿಗರು ಬೆಂಗಳೂರಿನ ಜೆಡಿಎಸ್ ಕಛೇರಿಯಲ್ಲಿ ಪಕ್ಷಕ್ಕೆ ಸೇರ್ಪಡೆಯಾದರು. ಮಾಜಿ ಪ್ರಧಾನಿ ದೇವೇಗೌಡರು ಈ ಸಂದರ್ಭದಲ್ಲಿ ಮಾತನಾಡಿದರು.


ಕೋಲಾರ, ೦೫ ಮಾರ್ಚ್ (ಹಿ.ಸ)

ಆಂಕರ್ : ಹದಿನಾರು ಬಜೆಟ್ ಗಳನ್ನು ಮಂಡಿಸಿ ಹದಿನೇಳನೇ ಬಜೆಟ್ ಮಂಡಿಸಲು ಹೊರಟಿರುವ ಭೂಪರು ಕೋಲಾರ, ಚಿಕ್ಕಬಳ್ಳಾಪುರ ಜಿಲ್ಲೆಗಳಿಗೆ ಬೆಂಗಳೂರಿನ ಕೊಳಚೆ ನೀರನ್ನು ಹರಿಸಿದರು ಎಂದು ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡರು ಆಕ್ರೋಶ ವ್ಯಕ್ತಪಡಿಸಿದರು.

ಬೆಂಗಳೂರಿನ ಜೆಡಿಎಸ್ ಪಕ್ಷದ ರಾಜ್ಯ ಕಚೇರಿ ಜೆಪಿ ಭವನದಲ್ಲಿ ಗುರುವಾರ ನಡೆದ ಮಾಲೂರು ವಿಧಾನಸಭೆ ಕ್ಷೇತ್ರದ ಹಿರಿಯ ಮುಖಂಡರಾದ ಹೂಡಿ ವಿಜಯಕುಮಾರ್ ಅವರ ಪಕ್ಷ ಸೇರ್ಪಡೆ ಹಾಗೂ ಅವರ ನೇತೃತ್ವದ ಸ್ವಾಭಿಮಾನಿ ಜನತಾ ಪಕ್ಷದ ವಿಲೀನ ಕಾರ್ಯಕ್ರಮದಲ್ಲಿ ಭಾಗಿಯಾಗಿ ಮಾಜಿ ಪ್ರಧಾನಿಗಳು ಮಾತನಾಡಿದರು.

ನದಿಯ ನೀರು ಕೊಡುತ್ತೇವೆ ಎಂದು ಹೇಳಿದ್ದರು. ಆದರೆ ರಾಜಧಾನಿಯ ಕೊಚ್ಚೆ ನೀರನ್ನು ಆ ಎರಡು ಜಿಲ್ಲೆಗಳ ಜನರಿಗೆ ಕೊಟ್ಟಿದ್ದಾರೆ. ಒಂದು ಕಾಲದಲ್ಲಿ ಕೋಲಾರದ ಟೊಮ್ಯಾಟೊ ಎಂದರೆ ಜಗತ್ತಿಗೇ ಪ್ರಸಿದ್ಧಿ. ಆದರೆ, ಈಗ ಅದನ್ನು ತಿನ್ನಬೇಡಿ ಎಂದು ಎಲ್ಲರೂ ಹೇಳುತ್ತಿದ್ದಾರೆ. ಇದಕ್ಕೆ ಆ ಗಲೀಜು ನೀರು ಮತ್ತು ಕಾಂಗ್ರೆಸ್ ಸರಕಾರವೇ ಕಾರಣ ಎಂದು ದೇವೇಗೌಡರು ದೂರಿದರು.

ನಾನು ಈ ರಾಜ್ಯದ ಮುಖ್ಯಮಂತ್ರಿ ಆಗುವುದಕ್ಕೆ ಮೊದಲು ಖಖಾನೆ ಖಾಲಿ ಮಾಡಿದ್ದರು. ಸರ್ಕಾರಿ ನೌಕರರಿಗೆ ಸಂಬಳ ಕೊಡಲು ಅಂದಿನ ಮುಖ್ಯಮಂತ್ರಿ ವೀರಪ್ಪ ಮೊಯಿಲಿ ಅವರು ಕೋಲ್ಕತಾದ ಪಿಯರ್ ಲೆಸ್ ಕಂಪನಿಯಿAದ ₹೨೦೦ ಕೋಟಿ ಸಾಲ ತಂದಿದ್ದರು. ಅಂಥ ಸಂದರ್ಭದಲ್ಲಿ ನಾನು ಈ ರಾಜ್ಯವನ್ನು ಹೇಗೆ ನಡೆಸಿರಬೇಕು ಎಂಬುದನ್ನು ಊಹೆ ಮಾಡಿಕೊಳ್ಳಿ ಎಂದು ಮಾಜಿ ಪ್ರಧಾನಿಗಳು ಹೇಳಿದರು.

ವತ್ತು ಇವತ್ತಿನ ಮುಖ್ಯಮಂತ್ರಿಗಳನ್ನು ನನ್ನ ಸಂಪುಟದಲ್ಲಿ ಹಣಕಾಸು ಮಂತ್ರಿ ಆಗಿದ್ದರು. ಎಲ್ಲವೂ ಅವರಿಗೂ ಗೊತ್ತಿದೆ. ಧರ್ಮಸಿಂಗ್ ಅವರು ಹಣಕಾಸು ಖಾತೆ ಮಾತ್ರ ಕೊಟ್ಟು ಅಬಕಾರಿ ಖಾತೆ ಕೊಡಲಿಲ್ಲ ಎಂಬ ಕಾರಣಕ್ಕೆ ಈ ಮಹಾನುಭಾವರು ಮುನಿಸಿಕೊಂಡಿದ್ದರು ಎಂದು ಅವರು ಟೀಕಾ ಪ್ರಹಾರ ನಡೆಸಿದರು.

ಕಳೆದ ವಿಧಾನಸಭೆ ಚುನಾವಣೆಯಲ್ಲಿ ಕುಮಾರಸ್ವಾಮಿ ಅವರು ಪಂಚರತ್ನ ಎಂಬ ಅತ್ಯುತ್ತಮ ಯೋಜನೆಗಳನ್ನು ಘೋಷಿಸಿದ್ದರು. ಉಚಿತ ಮನೆ, ಉಚಿತ ಶಿಕ್ಷಣ, ಉಚಿತ ಆರೋಗ್ಯ, ಉದ್ಯೋಗ ಎಲ್ಲವನ್ನು ಭರವಸೆ ನೀಡಿದ್ದರು. ಕಾಂಗ್ರೆಸ್ ನವರು ಕೊನೆ ಘಳಿಗೆಯಲ್ಲಿ ಗ್ಯಾರಂಟಿ, ಫ್ರೀ ಫ್ರೀ ಎಂದರು. ಜನರು ಮಾರು ಹೋದರು. ಈಗ ನೋಡಿದರೆ ಗ್ಯಾರಂಟಿಗಳು ಬೊಕ್ಕಸಕ್ಕೆ ಹೊರೆ ಆಗುತ್ತವೆ ಎಂದು ಬೊಬ್ಬೆ ಹಾಕುತ್ತಿದ್ದಾರೆ ಎಂದು ಮಾಜಿ ಪ್ರಧಾನಿಗಳು ಗುಡುಗಿದರು.

ಜೆಡಿಎಸ್ ಬಲಿಷ್ಟವಾಗಿದೆ. ನಾವು ಎನ್ಡಿಎ ಮೈತ್ರಿಯಲ್ಲಿ ಇದ್ದೇವೆ. ಮೈತ್ರಿಯನ್ನು ಉಳಿಸಿಕೊಳ್ಳುತ್ತೇವೆ ಹಾಗೂ ಪಕ್ಷವನ್ನು ಕೂಡ ಕಟ್ಟುತ್ತೇವೆ. ಅದಕ್ಕೆ ಮಾಲೂರು ಮುಖಂಡರ ಸೇರ್ಪಡೆ ಒಂದು ಆರಂಭವಷ್ಟೇ ಎಂದು ಮಾಜಿ ಪ್ರಧಾನಿಗಳು ಹೇಳಿದರು.

ಹಿಂದೂಸ್ತಾನ್ ಸಮಾಚಾರ್ / ಎಸ್.ಚಂದ್ರಶೇಖರ್


 rajesh pande