
ಹಾಸನ, 05 ಮಾರ್ಚ್ (ಹಿ.ಸ.):
ಆ್ಯಂಕರ್:
ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ವತಿಯಿಂದ 2025-26ನೇ ಸಾಲಿನಲ್ಲಿ ಅಲ್ಪಸಂಖ್ಯಾತರ ಸಮುದಾಯದ ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಬೌದ್ಧ, ಸಿಖ್, ಮತ್ತು ಪಾರ್ಸಿ. ನಿರುದ್ಯೋಗ ಯುವಕ/ಯುವತಿಯರಿಗೆ ಉಚಿತ ವಸತಿ ಮತ್ತು ಊಟದ ವ್ಯವಸ್ಥೆಯೊಂದಿಗೆ ಒಂದು ತಿಂಗಳ ಲಘು/ಭಾರಿ ವಾಹನ ಚಾಲನಾ ತರಬೇತಿ ಹಾಗೂ ಪರವಾನಗಿ ವಿತರಣೆ ಮಾಡುವ ಕಾರ್ಯಕ್ರಮದಡಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ ಸಂಸ್ಥೆಯು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ಅಭ್ಯರ್ಥಿಗಳು KSRTCjobs.karnataka.gov.in ಜಾಲತಾಣದಲ್ಲಿ ಅರ್ಜಿ ಸಲ್ಲಿಸುವ ಮೂಲಕ ನೋಂದಾಯಿಸಿಕೊಳ್ಳಬಹುದಾಗಿದೆ, ಹೆಚ್ಚಿನ ಮಾಹಿತಿಗಾಗಿ ಕ.ರಾರ.ಸಾ.ನಿಗಮ, ಪ್ರಾದೇಶಿಕ ತರಬೇತಿ ಕೇಂದ್ರ ಡೈರಿ ವೃತ್ತ, ರಿಂಗ್ ರಸ್ತೆ, ಶ್ರೀಮತಿ ಎಲ್.ವಿ. ಪಾಲಿಟೆಕ್ನಿಕ್ ಹಿಂಭಾಗ ಹಾಸನ-573201 ದೂರವಾಣಿ ಸಂ: 9972293886, 8904045818, 9686684655 ಸಂಪರ್ಕಿಸಬಹುದಾಗಿದೆ ಎಂದು ಕ.ರಾ.ರ.ಸಾ.ನಿ ಪ್ರಾದೇಶಿಕ ತರಬೇತಿ ಕೇಂದ್ರ ಪ್ರಾಂಶುಪಾಲರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
---------------
ಹಿಂದೂಸ್ತಾನ್ ಸಮಾಚಾರ್ / Rakesh Mahadevappa