ಮಾ.7ರಂದು ಕಮಡೊಳ್ಳಿಯಲ್ಲಿ ಸರ್ಕಾರಿ ಪಾಲಿಟೆಕ್ನಿಕ್ ಭೂಮಿ ಪೂಜೆ
ಧಾರವಾಡ, 05 ಮಾರ್ಚ್ (ಹಿ.ಸ.): ಆ್ಯಂಕರ್: ಧಾರವಾಡ ಜಿಲ್ಲೆಯ ಕುಂದಗೋಳ ತಾಲೂಕಿನ ಕಮಡೊಳ್ಳಿ ಗ್ರಾಮದಲ್ಲಿ ಶ್ರೀಮತಿ ಆರ್.ಎಫ್.ಪಾಟೀಲ ಸರ್ಕಾರಿ ಪಾಲಿಟೆಕ್ನಿಕ್ ಕಟ್ಟಡದ ಭೂಮಿ ಪೂಜಾ ಕಾರ್ಯಕ್ರಮ ಮಾ.7ರಂದು ಮಧ್ಯಾಹ್ನ 2 ಗಂಟೆಗೆ ನಡೆಯಲಿದೆ. ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಹಾಗೂ ವಿಧಾನ ಪರಿಷತ್ ಸಭಾಪತಿ
ಮಾ.7ರಂದು ಕಮಡೊಳ್ಳಿಯಲ್ಲಿ ಸರ್ಕಾರಿ ಪಾಲಿಟೆಕ್ನಿಕ್ ಭೂಮಿ ಪೂಜೆ


ಧಾರವಾಡ, 05 ಮಾರ್ಚ್ (ಹಿ.ಸ.):

ಆ್ಯಂಕರ್:

ಧಾರವಾಡ ಜಿಲ್ಲೆಯ ಕುಂದಗೋಳ ತಾಲೂಕಿನ ಕಮಡೊಳ್ಳಿ ಗ್ರಾಮದಲ್ಲಿ ಶ್ರೀಮತಿ ಆರ್.ಎಫ್.ಪಾಟೀಲ ಸರ್ಕಾರಿ ಪಾಲಿಟೆಕ್ನಿಕ್ ಕಟ್ಟಡದ ಭೂಮಿ ಪೂಜಾ ಕಾರ್ಯಕ್ರಮ ಮಾ.7ರಂದು ಮಧ್ಯಾಹ್ನ 2 ಗಂಟೆಗೆ ನಡೆಯಲಿದೆ.

ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಹಾಗೂ ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಘನ ಉಪಸ್ಥಿತಿ ವಹಿಸುವರು. ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ ಎಸ್. ಲಾಡ್ ಭೂಮಿ ಪೂಜೆ ನೆರವೇರಿಸಲಿದ್ದು, ಉನ್ನತ ಶಿಕ್ಷಣ ಸಚಿವ ಡಾ. ಎಂ.ಸಿ. ಸುಧಾಕರ ಉಪಸ್ಥಿತಿ ವಹಿಸುವರು.

ಶಾಸಕ ಎಂ.ಆರ್. ಪಾಟೀಲ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದಾರೆ. ವಿವಿಧ ಜನಪ್ರತಿನಿಧಿಗಳು ಮತ್ತು ಹಿರಿಯ ಅಧಿಕಾರಿಗಳು ಕಾರ್ಯಕ್ರಮದಲ್ಲಿ ಭಾಗವಹಿಸುವರು ಎಂದು ಕಾಲೇಜು ಪ್ರಾಚಾರ್ಯ ಅಶೋಕ ಕಬ್ಬೇರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

---------------

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande