ಜೋಯಿಡಾ ಸರಕಾರಿ ಕಾಲೇಜು ಕಟ್ಟಡ ಉದ್ಘಾಟನೆ
ಜೋಯಿಡಾ, 05 ಮಾರ್ಚ್ (ಹಿ.ಸ.): ಆ್ಯಂಕರ್: ಕಾಲೇಜು ಶಿಕ್ಷಣ ಇಲಾಖೆ ಹಾಗೂ ಕರ್ನಾಟಕ ಗೃಹ ಮಂಡಳಿಯ ಆಶ್ರಯದಲ್ಲಿ 2021-22ನೇ ಸಾಲಿನ ವಿಶೇಷ ಅಭಿವೃದ್ಧಿ ಯೋಜನೆಯ ಅನುದಾನದಲ್ಲಿ ಮಂಜೂರಾದ ಉತ್ತರ ಕನ್ನಡ ಜಿಲ್ಲೆಯ ಜೋಯಿಡಾದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಮೊದಲ ಮಹಡಿಯಲ್ಲಿ ಅಂದಾಜು 100.00ಲಕ್ಷ ರೂ. ಗಳಲ
RVD


ಜೋಯಿಡಾ, 05 ಮಾರ್ಚ್ (ಹಿ.ಸ.):

ಆ್ಯಂಕರ್:

ಕಾಲೇಜು ಶಿಕ್ಷಣ ಇಲಾಖೆ ಹಾಗೂ ಕರ್ನಾಟಕ ಗೃಹ ಮಂಡಳಿಯ ಆಶ್ರಯದಲ್ಲಿ 2021-22ನೇ ಸಾಲಿನ ವಿಶೇಷ ಅಭಿವೃದ್ಧಿ ಯೋಜನೆಯ ಅನುದಾನದಲ್ಲಿ ಮಂಜೂರಾದ ಉತ್ತರ ಕನ್ನಡ ಜಿಲ್ಲೆಯ ಜೋಯಿಡಾದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಮೊದಲ ಮಹಡಿಯಲ್ಲಿ ಅಂದಾಜು 100.00ಲಕ್ಷ ರೂ. ಗಳಲ್ಲಿ ನಿರ್ಮಾಣಗೊಂಡ ಸಭಾಂಗಣ ಹಾಗೂ ಕೊಠಡಿಯ ಶಾಸಕ ಆರ್.ವಿ.ದೇಶಪಾಂಡೆ ಉದ್ಘಾಟನೆಯನ್ನು ನೆರವೇರಿಸಿದರು.

ಇದೆ ಸಂದರ್ಭದಲ್ಲಿ ದೇವರಾಜ ಅರಸು ನಿಗಮದಿಂದ ಮಂಜೂರಾದ ಹೊಲಿಗೆ ಯಂತ್ರಗಳನ್ನು ಮತ್ತು ಕೃಷಿ ಇಲಾಖೆಯಿಂದ ಮಂಜೂರಾದ ವಿವಿಧ ಸಲಕರಣೆಗಳನ್ನು ಅರ್ಹ ಫಲಾನುಭವಿಗಳಿಗೆ ಹಸ್ತಾಂತರಿಸಿದರು.

---------------

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande