
ವಿಜಯಪುರ, 05 ಮಾರ್ಚ್ (ಹಿ.ಸ.)
ಆ್ಯಂಕರ್ : ವಿಜಯಪುರ ಜಿಲ್ಲೆಯ ಸಿಂದಗಿ ಮತಕ್ಷೇತ್ರದ ತಾಂಬಾ ಗ್ರಾಮದಲ್ಲಿ ಶಾಸಕರ ಪ್ರದೇಶಾಭಿವೃದ್ಧಿಯಲ್ಲಿ ಮಂಜೂರಾದ ಜ್ಯೋತಿಬಾ ಪುಲೆ ಸಮುದಾಯ ಭವನ ನಿರ್ಮಾಣದ ಕಾಮಗಾರಿಗೆ ಚಾಲನೆ ನೀಡಲಾಯಿತು.
ಸಿಂದಗಿ ಶಾಸಕ ಅಶೋಕ ಮನಗೂಳಿ ಅವರು ಕಾಮಗಾರಿಗೆ ಚಾಲನೆ ನೀಡಿದರು. ಇದೆ ಸಂದರ್ಭದಲ್ಲಿ ಬಂಥನಾಳ ಪರಮ ಪೂಜ್ಯರು, ಇಂಡಿ ಶಾಸಕರಾದ ಯಶವಂತರಾಯಗೌಡ ಪಾಟೀಲ್, ಮಾಳಿ ಸಮಾಜದ ಅಧ್ಯಕ್ಷರು, ಗ್ರಾಮ ಪಂಚಾಯತ್ ಅಧ್ಯಕ್ಷರು, ಸದಸ್ಯರು, ಮಾಜಿ ಅಧ್ಯಕ್ಷರು, ಮುಖ್ಯ ಅತಿಥಿಗಳು ಸೇರಿದಂತೆ ಸಮಾಜದ ಮುಖಂಡರು, ಕಾರ್ಯಕರ್ತರು, ಯುವಕ ಮಿತ್ರರು ಉಪಸ್ಥಿತರಿದ್ದರು.
---------------
ಹಿಂದೂಸ್ತಾನ್ ಸಮಾಚಾರ್ / jyothi deshpande