
ಬೆಂಗಳೂರು, 05 ಮಾರ್ಚ್ (ಹಿ.ಸ.):
ಆ್ಯಂಕರ್:ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಾರ್ಚ್ 6, 2026ರಂದು ರಾಜ್ಯದ 2026-27ನೇ ಸಾಲಿನ ಬಜೆಟ್‌ನ್ನು ವಿಧಾನಸೌಧದಲ್ಲಿ ಮಂಡಿಸಲಿದ್ದಾರೆ. ಇದು ಅವರ 17ನೇ ಬಜೆಟ್ ಆಗಿದ್ದು, ದಾಖಲೆಯಾಗಿದೆ.
ಈ ಬಾರಿ ಬಜೆಟ್‌ಗೆ ಮತ್ತೊಂದು ವಿಶೇಷ ಸೇರ್ಪಡೆಯಾಗಿದೆ. ರಾಜ್ಯದ ಆಯ್ದ ಬಸ್ ನಿಲ್ದಾಣಗಳಲ್ಲಿನ ಎಲ್‌ಇಡಿ ಪರದೆಗಳು ಹಾಗೂ ಟಿವಿಗಳಲ್ಲಿ ಬಜೆಟ್‌ನ್ನು ನೇರಪ್ರಸಾರ ಮಾಡಲು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ತೀರ್ಮಾನಿಸಿದೆ. ನಾಳೆ ಬೆಳಗ್ಗೆ 10.15ರಿಂದ ಬಜೆಟ್ ನೇರ ಪ್ರಸಾರ ಆರಂಭವಾಗಲಿದ್ದು, ಬಳಿಕ ಮುಖ್ಯಮಂತ್ರಿಗಳ ಪತ್ರಿಕಾಗೋಷ್ಠಿಯೂ ನೇರವಾಗಿ ಪ್ರಸಾರಗೊಳ್ಳಲಿದೆ. ರಾಜ್ಯದ ಜನತೆಗೆ ಬಜೆಟ್ ಪ್ರಕ್ರಿಯೆಯನ್ನು ತಲುಪಿಸುವ ಉದ್ದೇಶದಿಂದ ಈ ನಿರ್ಧಾರ ಕೈಗೊಳ್ಳಲಾಗಿದೆ.
ಮುಖ್ಯಮಂತ್ರಿಗಳ ತವರು ಜಿಲ್ಲೆ ಮೈಸೂರಿನಲ್ಲಿ ಅಭಿಮಾನಿಗಳು ವಿಶೇಷವಾಗಿ ಶುಭಕೋರಿದ್ದಾರೆ. ನಗರದ ಕೋಟೆ ಆಂಜನೇಯ ಸ್ವಾಮಿ ದೇವಸ್ಥಾನದ ಮುಂಭಾಗ ಸುಮಾರು 8 ಸಾವಿರ ಚದರ ಅಡಿಗಳ ವಿಸ್ತೀರ್ಣದಲ್ಲಿ ಕಲಾವಿದ ಪುನೀತ್ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಬೃಹತ್ ರಂಗೋಲಿ ಭಾವಚಿತ್ರವನ್ನು ನಿರ್ಮಿಸಿದ್ದಾರೆ.
ಕರ್ನಾಟಕದ ಭೂಪಟದ ಆಕೃತಿಯೊಳಗೆ ಬಜೆಟ್ ಮುಂಗಡ ಪತ್ರವನ್ನು ಹಿಡಿದಿರುವ ರೀತಿಯಲ್ಲಿ ಚಿತ್ರ ರೂಪಿಸಲಾಗಿದೆ. ದಾಖಲೆಯ 17ನೇ ಬಜೆಟ್ ಮಂಡನೆಗೆ ತವರು ಜಿಲ್ಲೆಯಲ್ಲಿ ಅಭಿಮಾನಿಗಳು ಬೆಂಬಲ ವ್ಯಕ್ತಪಡಿಸಿದ್ದು, ರಾಜ್ಯದ ಜನರಲ್ಲಿ ಬಜೆಟ್ ಕುರಿತು ಹೆಚ್ಚಿನ ನಿರೀಕ್ಷೆ ಮೂಡಿದೆ.
---------------
ಹಿಂದೂಸ್ತಾನ್ ಸಮಾಚಾರ್ / Rakesh Mahadevappa