ಬೆಂಗಳೂರು ಸೇರಿ ರಾಜ್ಯದ ನಾನಾ ಕಡೆ ಲೋಕಾಯುಕ್ತ ದಾಳಿ
ಬೆಂಗಳೂರು, 05 ಮಾರ್ಚ್ (ಹಿ.ಸ.): ಆ್ಯಂಕರ್: ಭ್ರಷ್ಟಾಚಾರ ಮತ್ತು ಅಕ್ರಮ ಆಸ್ತಿ ಗಳಿಕೆ ಆರೋಪಗಳ ಹಿನ್ನೆಲೆ ಕರ್ನಾಟಕ ಲೋಕಾಯುಕ್ತ ಅಧಿಕಾರಿಗಳು ಗುರುವಾರ ಬೆಳಗ್ಗೆ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಏಕಕಾಲಕ್ಕೆ ದಾಳಿ ನಡೆಸಿದ್ದಾರೆ. ರಾಜಧಾನಿ ಬೆಂಗಳೂರು ಸೇರಿದಂತೆ ಮಂಡ್ಯ, ಧಾರವಾಡ, ಹಾಸನ, ಮೈಸೂರು, ವಿ
Lokayukta


ಬೆಂಗಳೂರು, 05 ಮಾರ್ಚ್ (ಹಿ.ಸ.):

ಆ್ಯಂಕರ್:

ಭ್ರಷ್ಟಾಚಾರ ಮತ್ತು ಅಕ್ರಮ ಆಸ್ತಿ ಗಳಿಕೆ ಆರೋಪಗಳ ಹಿನ್ನೆಲೆ ಕರ್ನಾಟಕ ಲೋಕಾಯುಕ್ತ ಅಧಿಕಾರಿಗಳು ಗುರುವಾರ ಬೆಳಗ್ಗೆ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಏಕಕಾಲಕ್ಕೆ ದಾಳಿ ನಡೆಸಿದ್ದಾರೆ. ರಾಜಧಾನಿ ಬೆಂಗಳೂರು ಸೇರಿದಂತೆ ಮಂಡ್ಯ, ಧಾರವಾಡ, ಹಾಸನ, ಮೈಸೂರು, ವಿಜಯಪುರ ಮತ್ತು ಯಾದಗಿರಿ ಜಿಲ್ಲೆಗಳಲ್ಲಿ ಮನೆ ಹಾಗೂ ಕಚೇರಿಗಳಲ್ಲಿ ಶೋಧ ಕಾರ್ಯಾಚರಣೆ ನಡೆಸಿದ್ದಾರೆ.

ಬೆಂಗಳೂರು ನಗರದಲ್ಲಿನ ನಾಲ್ಕು ಸ್ಥಳಗಳಲ್ಲಿ ದಾಳಿ ನಡೆದಿದ್ದು, ಕೆಆರ್‌ಐಡಿಎಲ್ ಮುಖ್ಯ ಇಂಜಿನಿಯರ್ ವಸಂತ್ ವಿ. ನಾಯಕ್, ಬಿಡಿಎ ವ್ಯಾಪ್ತಿಯ ಆರ್‌ಎಫ್‌ಓ ಡಾಲೇಶ್ ಹಾಗೂ ರೈತ ಸೇವಾ ಸಹಕಾರ ಸಂಘದ ಸಿಇಓ ಶಶಿಧರ್ ಅವರ ನಿವಾಸ ಮತ್ತು ಕಚೇರಿಗಳಲ್ಲಿ ದಾಖಲೆಗಳ ಪರಿಶೀಲನೆ ಕೈಗೊಳ್ಳಲಾಗಿದೆ.

ಯಾದಗಿರಿಯ ವಿದ್ಯುತ್ ಇಲಾಖೆಯ ಉಪ ವಿದ್ಯುತ್ ಪರಿವೀಕ್ಷಕ ವೀರೇಶ್ ಹಿರೇಮಠ, ಮಂಡ್ಯದ ಲೋಕೋಪಯೋಗಿ ಇಲಾಖೆಯ ಉಪವಿಭಾಗದ ಎಎಇ ಎಸ್. ಸತೀಶ್, ಧಾರವಾಡದ ಹಿಂದುಳಿದ ವರ್ಗಗಳ ಹಾಗೂ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ತಾಲೂಕು ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿ ಎಂ.ಕೆ. ಸುರಕೋಡ ಅವರ ಮನೆ ಮೇಲೂ ದಾಳಿ ನಡೆದಿದೆ.

ಹಾಸನ ಮಹಾನಗರ ಪಾಲಿಕೆಯ ಎಎಇ ಎಂ.ಸಿ. ಸತ್ಯನಾರಾಯಣ, ಮೈಸೂರು ಜಲಭವನದಲ್ಲಿನ ಕರ್ನಾಟಕ ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ ಎಎಇ ಹಾಗೂ ಇಇ ಆಸಿಫ್ ಇಕ್ಬಾಲ್ ಮತ್ತು ವಿಜಯಪುರದ ಕೃಷ್ಣಾ ಭಾಗ್ಯ ಜಲ ನಿಗಮ ಲಿಮಿಟೆಡ್ ಕಿರಿಯ ಇಂಜಿನಿಯರ್ ಪ್ರಕಾಶ್ ಪಿ.ಜಿ ಅವರ ಮನೆಗಳಲ್ಲಿಯೂ ಶೋಧ ನಡೆಯುತ್ತಿದೆ.

ಲೋಕಾಯುಕ್ತ ಅಧಿಕಾರಿಗಳು ಬ್ಯಾಂಕ್ ಖಾತೆ ವಿವರಗಳು, ಆಸ್ತಿ ದಾಖಲೆಗಳು ಮತ್ತು ಹಣಕಾಸು ವ್ಯವಹಾರಗಳ ಮಾಹಿತಿಯನ್ನು ಸಂಗ್ರಹಿಸುತ್ತಿದ್ದಾರೆ.

ಅಕ್ರಮ ಆಸ್ತಿ ಗಳಿಕೆ ಹಾಗೂ ಆದಾಯಕ್ಕೆ ಮೀರಿ ಸಂಪಾದನೆ ಆರೋಪಗಳ ಕುರಿತು ಪ್ರಾಥಮಿಕ ಮಾಹಿತಿ ಆಧರಿಸಿ ದಾಳಿ ನಡೆಸಲಾಗಿದೆ ಎಂದು ಮೂಲಗಳು ತಿಳಿಸಿವೆ.

ಇದೇ ವೇಳೆ ಹಾಸನ ಮಹಾನಗರ ಪಾಲಿಕೆಯ ಎಎಇ ಎಂ.ಸಿ. ಸತ್ಯನಾರಾಯಣ ಬಾಗಿಲು ತೆರೆಯದೆ ಲೋಕಾಯುಕ್ತ ಅಧಿಕಾರಿಗಳನ್ನು ಸತಾಯಿಸಿದ ಘಟನೆ ನಡೆದಿದೆ.

---------------

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande