
ಬೆಳಗಾವಿ, 05 ಮಾರ್ಚ್ (ಹಿ.ಸ.):
ಆ್ಯಂಕರ್:ಕರ್ನಾಟಕದ ಬೆಳಗಾವಿ ಜಿಲ್ಲೆಯ ಯಡೂರಿನ ಶ್ರೀ ವೀರಭದ್ರೇಶ್ವರ ದೇವಸ್ಥಾನದಲ್ಲಿ ರಾಜಗೋಪುರ, ಕಳಸಾರೋಹಣ ಮತ್ತು ಮಹಾಕುಂಭಾಭಿಷೇಕ ಸಮಾರಂಭದ ಉದ್ಘಾಟನಾ ಕಾರ್ಯಕ್ರಮ ಭಕ್ತಿಭಾವದಿಂದ ನಡೆಯಿತು.
ಕಾರ್ಯಕ್ರಮದಲ್ಲಿ ಉಪರಾಷ್ಟ್ರಪತಿ ಸಿ.ಪಿ. ರಾಧಾಕೃಷ್ಣನ್ ಮುಖ್ಯ ಅತಿಥಿಯಾಗಿ ಭಾಗವಹಿಸಿ ಮಾತನಾಡಿದರು. ಈ ಕ್ಷಣವನ್ನು ಆಧ್ಯಾತ್ಮಿಕ ಪುನರುತ್ಥಾನ ಮತ್ತು ನಾಗರಿಕತೆಯ ಪುನರುಜ್ಜೀವನದ ಮಹತ್ವದ ಘಟ್ಟವೆಂದು ಅವರು ಬಣ್ಣಿಸಿದರು.
ವೀರ-ಶೈವ ಲಿಂಗಾಯತ ಸಂಪ್ರದಾಯದ ಶ್ರೀಮಂತ ಪರಂಪರೆಯನ್ನು ಉಲ್ಲೇಖಿಸಿದ ಅವರು, ಆಧ್ಯಾತ್ಮಿಕ, ಶೈಕ್ಷಣಿಕ ಹಾಗೂ ಸಾಮಾಜಿಕ ಉನ್ನತಿಗೆ ಈ ಪರಂಪರೆ ಮಹತ್ತರ ಕೊಡುಗೆ ನೀಡಿದೆ ಎಂದು ಹೇಳಿದರು. ಭಾರತದ ಆಧ್ಯಾತ್ಮಿಕ ದೃಷ್ಟಿಕೋನವು ಪ್ರಕೃತಿಯಲ್ಲೂ ಹಾಗೂ ಪ್ರತಿಯೊಬ್ಬ ಮಾನವನಲ್ಲೂ ದೈವತ್ವವನ್ನು ಕಾಣುತ್ತದೆ ಎಂಬುದು ನಮ್ಮ ಸಂಸ್ಕೃತಿಯ ವೈಶಿಷ್ಟ್ಯ ಎಂದು ಅಭಿಪ್ರಾಯಪಟ್ಟರು.
ದೇಶದ ಅಭಿವೃದ್ಧಿ ಮತ್ತು ಪರಂಪರೆ ಪರಸ್ಪರ ಪೂರಕವಾಗಿರಬೇಕು ಎಂದು ಒತ್ತಿ ಹೇಳಿದ ಉಪರಾಷ್ಟ್ರಪತಿ, ಪವಿತ್ರ ಕ್ಷೇತ್ರಗಳ ಪುನರುಜ್ಜೀವನವು ಸಾಂಸ್ಕೃತಿಕ ಆತ್ಮವಿಶ್ವಾಸ ಮತ್ತು ಆಧ್ಯಾತ್ಮಿಕ ಅರಿವಿನ ಪುನರ್ ಸ್ಥಾಪನೆಯಾಗಿದೆ ಎಂದು ಹೇಳಿದರು.
ಸಮಾರಂಭದಲ್ಲಿ ರಾಜ್ಯಪಾಲ ಥಾವರಚಂದ್ ಗೇಹ್ಲೋಟ ಸೇರಿದಂತೆ ಗಣ್ಯರು, ಮಠಾಧೀಶರು, ಜನಪ್ರತಿನಿಧಿಗಳು ಹಾಗೂ ಸಾವಿರಾರು ಭಕ್ತರು ಉಪಸ್ಥಿತರಿದ್ದರು.
---------------
ಹಿಂದೂಸ್ತಾನ್ ಸಮಾಚಾರ್ / Rakesh Mahadevappa