ಬೆಳಗಾವಿಗೆ ಆಗಮಿಸಿದ ಉಪರಾಷ್ಟ್ರಪತಿ ಸಿ.ಪಿ. ರಾಧಾಕೃಷ್ಣನ್
ಬೆಳಗಾವಿ, 05 ಮಾರ್ಚ್ (ಹಿ.ಸ.): ಆ್ಯಂಕರ್:ಉಪರಾಷ್ಟ್ರಪತಿ ಸಿ.ಪಿ. ರಾಧಾಕೃಷ್ಣನ್ ಅವರು ಗುರುವಾರ ಬೆಳಗಾವಿಗೆ ಆಗಮಿಸಿದರು. ಬೆಳಗಾವಿ ವಿಮಾನ ನಿಲ್ದಾಣದಲ್ಲಿ ಅವರನ್ನು ಕರ್ನಾಟಕ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್, ರಾಜ್ಯ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಸೇರಿದಂತೆ ಜನಪ್ರತಿನಿಧಿಗಳು ಹಾಗೂ ಹಿರಿಯ
VP


ಬೆಳಗಾವಿ, 05 ಮಾರ್ಚ್ (ಹಿ.ಸ.):

ಆ್ಯಂಕರ್:ಉಪರಾಷ್ಟ್ರಪತಿ ಸಿ.ಪಿ. ರಾಧಾಕೃಷ್ಣನ್ ಅವರು ಗುರುವಾರ ಬೆಳಗಾವಿಗೆ ಆಗಮಿಸಿದರು. ಬೆಳಗಾವಿ ವಿಮಾನ ನಿಲ್ದಾಣದಲ್ಲಿ ಅವರನ್ನು ಕರ್ನಾಟಕ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್, ರಾಜ್ಯ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಸೇರಿದಂತೆ ಜನಪ್ರತಿನಿಧಿಗಳು ಹಾಗೂ ಹಿರಿಯ ಅಧಿಕಾರಿಗಳು ಆತ್ಮೀಯವಾಗಿ ಸ್ವಾಗತಿಸಿದರು.

ಉಪರಾಷ್ಟ್ರಪತಿಗಳು ಬೆಳಗಾವಿ ಜಿಲ್ಲೆಯ ಯಡೂರಿನ ಶ್ರೀ ವೀರಭದ್ರೇಶ್ವರ ದೇವಸ್ಥಾನದಲ್ಲಿ ನಡೆಯಲಿರುವ ರಾಜಗೋಪುರ ಉದ್ಘಾಟನೆ, ಕಳಸಾರೋಹಣ ಮತ್ತು ಮಹಾಕುಂಭಾಭಿಷೇಕ ಮಹೋತ್ಸವದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಲಿದ್ದಾರೆ. ದೇವಸ್ಥಾನದ ನೂತನ ರಾಜಗೋಪುರ ನಿರ್ಮಾಣ ಹಾಗೂ ಪುನರ್‌ನಿರ್ಮಾಣ ಕಾಮಗಾರಿಗಳು ಪೂರ್ಣಗೊಂಡ ಹಿನ್ನೆಲೆಯಲ್ಲಿ ಈ ಧಾರ್ಮಿಕ ಮಹೋತ್ಸವ ಆಯೋಜಿಸಲಾಗಿದೆ.

ಭದ್ರತಾ ದೃಷ್ಟಿಯಿಂದ ಬೆಳಗಾವಿ ನಗರ ಹಾಗೂ ಯಡೂರು ಸುತ್ತಮುತ್ತ ಕಟ್ಟುನಿಟ್ಟಿನ ಪೊಲೀಸ್ ಬಂದೋಬಸ್ತ್ ಕೈಗೊಳ್ಳಲಾಗಿದೆ. ಉಪರಾಷ್ಟ್ರಪತಿಗಳ ಭೇಟಿಯ ಹಿನ್ನೆಲೆಯಲ್ಲಿ ಸಂಚಾರ ವ್ಯವಸ್ಥೆಯಲ್ಲೂ ತಾತ್ಕಾಲಿಕ ಬದಲಾವಣೆಗಳನ್ನು ಮಾಡಲಾಗಿದೆ.

---------------

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande