ಪೈಪ್ ಲೈನ್ ಕಾಮಗಾರಿಗೆ ಸಚಿವ ಗುಂಡೂರಾವ್ ಚಾಲನೆ
ಬೆಂಗಳೂರು, 05 ಮಾರ್ಚ್ (ಹಿ.ಸ.): ಆ್ಯಂಕರ್: ಬೆಂಗಳೂರು ಗಾಂಧಿನಗರ ವಿಧಾನಸಭಾ ಕ್ಷೇತ್ರದ ಚಿಕ್ಕಪೇಟೆ ವಾರ್ಡ್ -109 ರ ಸೌರಾಷ್ಟ್ರ ಪೇಟೆ, ಮಾಮೂಲ್ ಪೇಟೆ ಹಾಗೂ ಪಿ.ಎಸ್.ಕೆ ಲೈನ್ ಪ್ರದೇಶಗಳಲ್ಲಿ ಹೊಸದಾಗಿ 300 mm ವ್ಯಾಸದ ಪೈಪ್‌ಲೈನ್ ಅಳವಡಿಸುವ ಯೋಜನೆಗೆ ಸಚಿವ ದಿನೇಶ್ ಗುಂಡೂರಾವ್ ಭೂಮಿ ಪೂಜೆ ನೆರವೇರ
pipeline work


ಬೆಂಗಳೂರು, 05 ಮಾರ್ಚ್ (ಹಿ.ಸ.):

ಆ್ಯಂಕರ್:

ಬೆಂಗಳೂರು ಗಾಂಧಿನಗರ ವಿಧಾನಸಭಾ ಕ್ಷೇತ್ರದ ಚಿಕ್ಕಪೇಟೆ ವಾರ್ಡ್ -109 ರ ಸೌರಾಷ್ಟ್ರ ಪೇಟೆ, ಮಾಮೂಲ್ ಪೇಟೆ ಹಾಗೂ ಪಿ.ಎಸ್.ಕೆ ಲೈನ್ ಪ್ರದೇಶಗಳಲ್ಲಿ ಹೊಸದಾಗಿ 300 mm ವ್ಯಾಸದ ಪೈಪ್‌ಲೈನ್ ಅಳವಡಿಸುವ ಯೋಜನೆಗೆ ಸಚಿವ ದಿನೇಶ್ ಗುಂಡೂರಾವ್ ಭೂಮಿ ಪೂಜೆ ನೆರವೇರಿಸಿದರು.

ಈ ಭಾಗದ ಜನರಿಗೆ ಸುಸಜ್ಜಿತವಾದ ಮೂಲಭೂತ ಸೌಕರ್ಯ ಒದಗಿಸುವ ಉದ್ದೇಶದಿಂದ ಈ ಕಾಮಗಾರಿಯನ್ನು ಕೈಗೆತ್ತಿಕೊಳ್ಳಲಾಗಿದೆ. ಆದಷ್ಟು ಬೇಗ ಕೆಲಸ ಮುಗಿಸಿ ಸಾರ್ವಜನಿಕರ ಬಳಕೆಗೆ ಮುಕ್ತಗೊಳಿಸಲಾಗುವುದು ಎಂದು ಸಚಿವರು ತಿಳಿಸಿದ್ದಾರೆ

ಈ ಸಂದರ್ಭದಲ್ಲಿ ಇಲಾಖೆಯ ಅಧಿಕಾರಿಗಳು ಹಾಗೂ ಸ್ಥಳೀಯ ಪ್ರಮುಖರು ಉಪಸ್ಥಿತರಿದ್ದರು.

---------------

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande